A meeting of the universal lasika program at the Anganwadi center
ಕಾನ ಹೊಸಹಳ್ಳಿ: ಸಾರ್ವತ್ರಿಕಾ ಲಸಿಕಾ ಕಾರ್ಯಕ್ರಮದಡಿಯಲ್ಲಿ ಅರ್ಹ ಮಕ್ಕಳನ್ನು ತಾಲೂಕ ಹಾಗೂ ಗ್ರಾಮೀಣ ಭಾಗದಲ್ಲಿ ಗುರುತಿಸಿ ಲಸಿಕೆಯಿಂದ ಮಕ್ಕಳು ವಂಚಿತರಾಗದಂತೆ ನಿಗಾವಹಿಸಬೇಕು ಎಂದು ತಾಲೂಕು ಆರೋಗ್ಯ ಅಧಿಕಾರಿ ಪ್ರದೀಪ್ ಅವರು ತಿಳಿಸಿದರು. ತಾಲೂಕಿನ ಬಣವಿಕಲ್ಲು ಗ್ರಾ.ಪಂ ವ್ಯಾಪ್ತಿಯ ಕೆಂಚೋಬನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ತಾಯಂದಿರ ಸಭೆ ಹಾಗೂ ಸಾರ್ವತ್ರಿಕ ಲಸಿಕ ಕಾರ್ಯಕ್ರಮ ಹಾಗೂ ವಿ.ಎಚ್.ಎನ್.ಡಿ ಕಾರ್ಯಕ್ರಮ ಮತ್ತು ಎಂ.ಎನ್.ಸಿ, ಪಿಎನ್.ಸಿ ಹಾಗೂ ಎಲ್ಲಾ ರಾಷ್ಟ್ರೀಯ ಕಾರ್ಯಕ್ರಮಗಳ ವರದಿಗಳನ್ನು ಪರಿಶೀಲನೆ ಮಾಡಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಿ, ಹೆಚ್ಚುವರಿ ಲಸಿಕಾ ಶಿಬಿರಗಳನ್ನು ಹಮ್ಮಿಕೊಂಡು ಲಸಿಕೆ ನೀಡುವ ಮೂಲಕ ಶೇ 100 ರಷ್ಟು ಪ್ರಗತಿ ಸಾಧಿಸಬೇಕು. ಗರ್ಭಿಣಿಯರು ಮತ್ತು ಮಕ್ಕಳಿಗೆ ಆರೋಗ್ಯ ಇಲಾಖೆಯ ಮಾರ್ಗಸೂಚಿ ಯಂತೆ ನಿಯಮಿತವಾಗಿ ಅಗತ್ಯ ಲಸಿಕೆಗಳನ್ನು ನೀಡುವುದರಿಂದ ತಾಯಿ ಮತ್ತು ಶಿಶು ಮರಣವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬಿಪಿಎಂ ವಿಶ್ವನಾಥ್ ಮತ್ತು ಆಶಾ ಮೇಲ್ವಿಚಾರಕಿ ಲತಾ ಎನ್.ಎಂ ಸೇರಿದಂತೆ ಬೆಳ್ಳಿಗಟೆ ಪ್ರಾಥಮಿಕ ಆರೋಗ್ಯ ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತರು ಸಾರ್ವಜನಿಕರು, ಮಕ್ಕಳು ಇದ್ದರು.