Department of Youth Empowerment and Sports; Application Invitation for Eklavya Award
ರಾಯಚೂರು,(ಕರ್ನಾಟಕ ವಾರ್ತೆ):- ಇಲ್ಲಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2023ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ ನಾಯಕ ಅವರು ತಿಳಿಸಿದ್ದಾರೆ.
ಆಸಕ್ತ ಜಿಲ್ಲೆಯ ಕ್ರೀಡಾಪಟುಗಳು ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಯಚೂರಿನಲ್ಲಿ ಪಡೆದು, ಭರ್ತಿ ಮಾಡಿ ಇದೇ 2024ರ ಸೆ.10ರ ಸಂಜೆ 5.30ರೊಳಗಾಗಿ ದ್ವಿ-ಪ್ರತಿಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಕಚೇರಿಯ ಸಮಯದಲ್ಲಿ ಸಂಪರ್ಕ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.