Breaking News

ವಿವಿಧ ಯೋಜನೆಗಳ ಪ್ರಗತಿಗೆ ಅಧಿಕಾರಿಗಳ ಪಾತ್ರ ಪ್ರಮುಖ: ಜಿಲ್ಲಾಧಿಕಾರಿ ನಿತೀಶ ಕೆ

The role of officials is important for the progress of various projects: District Collector Nitisha K

ಜಾಹೀರಾತು


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ
.

ರಾಯಚೂರು,ಆ.27,(ಕರ್ನಾಟಕ ವಾರ್ತೆ):- ಜಿಲ್ಲೆಯ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಗಳ ಪ್ರಗತಿ ಸಾಧಿಸಲು ಸಂಬAಧಿಸಿದ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ ಕೆ. ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಆ.27ರ ಮಂಗಳವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಂಬAಧಪಟ್ಟ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕಾಗಿದೆ. ಯಾವುದೇ ಯೋಜನೆಯನ್ನು ಅನುಷ್ಠಾನಗೊಳಿಸಲು ಇಚ್ಛಾಶಕ್ತಿ ಅತ್ಯವಶ್ಯಕವಾಗಿದ್ದು, ಇಚ್ಚಾಶಕ್ತಿಯಿಂದ ಕಾರ್ಯನಿರ್ವಹಿಸಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇಲಾಖೆಯ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇಲಾಖೆಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಾಗೂ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿದಾಗ ಉತ್ತಮ ಫಲಿತಾಂಶ ದೊರೆಯುತ್ತದೆ ಆ ನಿಟ್ಟಿನಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಒಟ್ಟು 2856 ಅಂಗನವಾಡಿ ಕೇಂದ್ರಗಳು, 32 ಮಿನಿ ಅಂಗನವಾಡಿ ಕೇಂದ್ರಗಳಿವೆ. ಇವುಗಳಲ್ಲಿ 2024-25ನೇ ಸಾಲಿನ ಜುಲೈ ಅಂತ್ಯಕ್ಕೆ 2,24,630 ಫಲಾನುಭವಿಗಳು ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದರು.
ಅAಗನವಾಡಿ ಕೇಂದ್ರಗಳ ಮೂಲಕ ಪೂರಕ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮ, ಚುಚ್ಚುಮದ್ದು ಕಾರ್ಯಕ್ರಮ, ಆರೋಗ್ಯ ತಪಾಸಣೆ, ತಾಯಂದಿರಿಗೆ ಆರೋಗ್ಯ ಮತ್ತು ಪೌಷ್ಟಿಕ ಶಿಕ್ಷಣ, ಶಾಲಾ ಪೂರ್ವ ಶಿಕ್ಷಣ ಹಾಗೂ ಮಾಹಿತಿ ಸೇವೆಯನ್ನು ಇಲಾಖೆಯಿಂದ ಒದಗಿಸಲಾಗುತ್ತಿದ್ದು, ಈ ಸೇವೆಗಳನ್ನು ಒದಗಿಸಲು ಹೆಚ್ಚಿನ ರೀತಿಯಲ್ಲಿ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.
ಈ ವೇಳೆ ಕೌಂಟಬಿಕ ದೌರ್ಜನ್ಯ ಯೋಜನೆ, ಬಾಲಕಿಯರ ವಸತಿ ಯೋಜನೆ, ಸಖಿ ಓನ್ ಸ್ಟಾಪ್ ಸೆಂಟರ್, ಒನ್ ಸ್ಟಾಪ್ ಸೆಂಟರ್, ಸ್ವಧಾರ ಕೇಂದ್ರ, ಸ್ವಧಾರ ಯೋಜನೆ, 2024ರ ಎಪ್ರೀಲ್ ರಿಂದ ಜೂನ್ ರ ಬಾಲ್ಯವಿವಾಹ ಅನುಸರಣಾ ಮಾಹಿತಿ, ಉದ್ಯೋಗ್ಯಸ್ಥ ಮಹಿಳೆಯರ ವಸತಿ ನಿಲಯದ ವಿವರ, ಮಿಷನ್ ಶಕ್ತಿ ಯೋಜನೆ ಸಭಾ ಕಾರ್ಯಸೂಚಿ, ಜಿಲ್ಲಾ ಮಹಿಳಾ ಸಬಲೀಕರಣ ಘಟಕದಿಂದ ನಡೆಯುತ್ತಿರುವ ಕಾರ್ಯಕ್ರಮಗಳು, 2023-24ನೇ ಸಾಲಿನ ಚೇತನ, ಧನಶ್ರೀ, ಉದ್ಯೋಗಿನಿ ಯೋಜನೆಯ ಫಲಾನುಭವಿಗಳ ಆಯ್ಕೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಬಾಲ್ಯವಿವಾಹ ತಡೆಗೆ ಜಾಗೃತಿ ಮೂಡಿಸಿ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ ತಡೆಗೆ ಸಾರ್ವಜನಿಕರಲ್ಲಿ ಹೆಚ್ಚಿನ ಮಟ್ಟದ ಅರಿವು ಮೂಡಸಲು ಜಾಗೃತಿ ಕಾರ್ಯಕ್ರಮಗಳ ಮೂಲಕ ಬಾಲ್ಯ ವಿವಾಹಕ್ಕೆ ತಡೆ ನೀಡಬೇಕು. ಅಲ್ಲದೆ ಜಿಲ್ಲೆಯ ಪ್ರತಿ ಗ್ರಾಮ ಮಟ್ಟದಲ್ಲಿ ಪೋಷಕರ ಒಳಗೊಂಡ ಜಾಗೃತಿ ಸಭೆಗಳು ನಡೆಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. ಪೋಶನ್ ಅಭಿಯಾನ ಯೋಜನೆ ಟ್ರ‍್ಯಾಕ್ ನಲ್ಲಿ ಮಾಹಿತಿ ಅಳವಡಿಕೆ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಪಡಿಸಿ ಪ್ರಗತಿಯನ್ನು ಸಾಧಿಸಬೇಕೆಂದರು.
ಇದೇ ಸಂದರ್ಭದಲ್ಲಿ ಹಿರಿಯ ಶ್ರೇಣಿ ದಿವಾನಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನವೀನ್ ಕುಮಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಕೈಗಾರಿಕಾರಿ ಅಧಿಕಾರಿ ಬಸವರಾಜ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಮುದುಕಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ಎಲ್ಲ ತಾಲೂಕಿನ ಮಹಿಳ ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳ ಇದ್ದರು.

About Mallikarjun

Check Also

ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿಮಾಡಿ, ಸಮಾಲೋಚನೆ ನಡೆಸಿ ಬಳಿಕ ಮನವಿಪತ್ರ ಸಲ್ಲಿಕೆ

Today in Delhi, I met Union Civil Aviation Minister Kinjarapu Ramamohan Naidu, held discussions and …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.