Breaking News

ಹೊಸಹಳ್ಳಿ ಪೊಲೀಸ್ ಠಾಣೆಯ ಆವರಣ ದ ಲ್ಲಿ ಶಾಂತಿ ಸಭೆ

Peace meeting at Hosahalli police station premises

ಜಾಹೀರಾತು


ಕಾನ ಹೊಸಹಳ್ಳಿ:- ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಹೊಸಹಳ್ಳಿ ಪೊಲೀಸ್ ಠಾಣೆಯಆವರಣದಲ್ಲಿ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕೂಡ್ಲಿಗಿ ಡಿ.ವೈ. ಎಸ್ ಪಿ ಮಲ್ಲೇಶಪ್ಪ ಮಲ್ಲಾಪುರ ಅ ವರ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ಜರಗಿತು. ಶಾಂತಿ ಸಭೆಯನ್ನು ಉದ್ದೇಶಿಸಿ ಮಾನ್ಯ ಡಿ. ವೈ. ಎಸ್ ಪಿ ಅವರು ಮಾತನಾಡಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಸರಕಾರದ ಆದೇಶಗಳನ್ನು ಪಾಲಿಸಿ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಆಚರಿಸಿ ಎಂದು ಹೇಳಿದರು.
ಈ ಶಾಂತಿ ಸಭೆಯನ್ನು ಉದ್ದೇಶಿಸಿ ಕೊಟ್ಟೂರು ವೃತ್ತದ ಸಿ.ಪಿ.ಐ. ವೆಂಕಟಸ್ವಾಮಿಯವರು ಮಾತನಾಡಿ ಯಾವುದೇ ಆಯಿತಕರ ಘಟನೆಗಳಿಗೆ ಅವಕಾಶ ಕೊಡದಂತೆ ತಮ್ಮ ತಮ್ಮ ಗ್ರಾಮಗಳಲ್ಲಿ ಹಬ್ಬಗಳನ್ನು ಶಾಂತಿಯಿಂದ ಆಚರಿಸಬೇಕು ಎಂದು ನುಡಿದರು.
ಗಣೇಶ ಮೂರ್ತಿ ಪ್ರತಿಷ್ಠಾಪಿಸುವಾಗ ಗ್ರಾಮ ಪಂಚಾಯಿತಿ ಮತ್ತು ಪೊಲೀಸ್ ಠಾಣೆ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಧ್ವನಿವರ್ಧಕ ಬಳಕೆಗೆ ಪೊಲೀಸರಿಂದ ಮತ್ತು ವಿದ್ಯುತ್ ದೀಪ ಬಳಸಲು ವಿದ್ಯುತ್ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಯ ವೇಳೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮಂಡಳಿಯವರು ಜಾಗೃತಿ ವಹಿಸಬೇಕು. ಗಣೇಶ ಮೂರ್ತಿಯನ್ನು ಕಾಯಲು ಸದಸ್ಯರ ಸಮಿತಿಯನ್ನು ರಚಿಸಬೇಕು ಹಾಗೂ ಗಣೇಶನ ದರ್ಶನಕ್ಕೆ ಆಗಮಿಸುವ ಮಹಿಳೆಯರಿಗೆ ಪ್ರತ್ಯೇಕ ವಾಗಿ ದರ್ಶನದ ವ್ಯವಸ್ಥೆ ಕಲ್ಪಿಸಿ ಕೊಡಬೇಕು.
ಪೊಲೀಸ್ ಠಾಣೆ ಅನುಮತಿ ಪಡೆಯುವ ಸಂದರ್ಭದಲ್ಲಿ ನೀವು ಕೇಳಿದ ದಿನದೊಂದೆ ರಾತ್ರಿ ಹತ್ತು ಗಂಟೆಯ ಒಳಗಾಗಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಬೇಕು ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿಯಿಂದ ಶಾಂತಿಯುತವಾಗಿ ಆಚರಿಸಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.
ಹೊಸಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಸಿದ್ದರಾಮ ಪ್ಪ ಬಿದರಾಣಿ ಅವರು ಮಾತನಾಡಿ ಠಾಣೆ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮದ ಮುಖಂಡರು ಹಾಗೂ ಎಲ್ಲಾ ಸಮುದಾಯದವರು ಅಣ್ಣ ತಮ್ಮಂದಿರಂತೆ ಶಾಂತಿ ಯುತವಾಗಿ ಯಾವುದೇ ಗದ್ದಲ ಗಲಾಟೆಗಳಿಗೆ ಅವಕಾಶ ನೀಡದಂತೆ ಹಬ್ಬಗಳನ್ನು ಆಚರಿಸಿರಿ. ಸರಕಾರ ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಿರಿ ಕಾನೂನು ಸುವ್ಯವಸ್ಥೆ ಪಾಲಿಸಿ ನಿಮ್ಮ ಒಳ್ಳೆ ಕಾರ್ಯ ಕೆಲಸಗಳಿಗೆ ಪೊಲೀಸ್ ಇಲಾಖೆ ಸದಾ ನಿಮ್ಮ ಜೊತೆ ಇರುತ್ತದೆ ಎಂದು ಸಾರ್ವಜನಿಕರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಗ್ರಾಮಗಳ ಮುಖಂಡರು, ಜನಪ್ರತಿನಿಧಿಗಳು, ಎಲ್ಲಾ ಸಮುದಾಯಗಳ ಮುಖಂಡರು, ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಸೇರಿದಂತೆ ಸಾರ್ವಜನಿಕರು ಇದ್ದರು.

About Mallikarjun

Check Also

ಸಂಬೋಳಿ ಸಂಬೋಳಿ ಎನ್ನುತ್ತ ಇಂಬಿನಲ್ಲಿದ್ದೇನೆ

I am in love with Samboli Samboli –ಸಚ್ಚಿದಾನಂದ ಪ್ರಭು ಚಟ್ನಳ್ಳಿ9886694454 ಪ್ರಚಲಿತದಲ್ಲಿರುವ ಮತ್ತು ಪ್ರಕಟವಾದ ವಚನ: ಲಿಂಗಾರ್ಚನೆಯ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.