Breaking News

ಇಬ್ಬರುಬಾಲಕಾರ್ಮಿಕರ ರಕ್ಷಣೆ; ಮಾಲೀಕರ ವಿರುದ್ಧಪ್ರಕರಣದಾಖಲು

Protection of two child labourers; File a case against the owner

ಜಾಹೀರಾತು


ರಾಯಚೂರು,- ಮಕ್ಕಳ ಸಹಾಯವಾಣಿಗೆ ಬಂದ ದೂರಿನ ಅನ್ವಯ ಟಾಸ್ಕ್ ಪೋರ್ಸ್ ಸಮಿತಿಯ ಅಧಿಕಾರಿಗಳಿಂದ ಜಿಲ್ಲೆಯ ದೇವದುರ್ಗ ತಾಲೂಕಿನ ಮಂದಕಲ್ ಕ್ರಾಸ್ ಶ್ರೀಸೂಗೂರೇಶ್ವರ ಹೋಟೆಲ್ (ಒಗ್ಗಣಿ)ನಲ್ಲಿ ಆ.೨೯ರಂದು ತಪಾಸಣೆ ಮಾಡಿ, ಇಬ್ಬರು ಬಾಲಕಾರ್ಮಿಕನ್ನು ರಕ್ಷಣೆ ಮಾಡಿದ್ದು, ಈ ಕುರಿತು ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕಾರ್ಮಿಕರನ್ನು ರಕ್ಷಣೆ ಮಾಡಿ, ಸರಕಾರಿ ಬಾಲಕರ ಬಾಲಮಂದಿರ ರಾಯಚೂರುರವರಿಗೆ ಒಪ್ಪಿಸಲಾಗಿರುತ್ತದೆ. ಮಕ್ಕಳನ್ನು ಕೆಲಸಕ್ಕೆ ನೇಮಕಮಾಡಿಕೊಂಡಿದ್ದ ಶ್ರೀ ಸೂಗೂರೇಶ್ವರ ಹೋಟೆಲ್ (ಒಗ್ಗಣಿ) ನ ಮಾಲೀಕರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
ಈ ವೇಳೆ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ ಅವರು ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ೨೦೧೬ರಂತೆ ೧೪ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಾಗೂ ೧೫ರಿಂದ ೧೮ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ವೇಳೆ ದುಡಿಸಿಕೊಂಡಲ್ಲಿ ೫೦,೦೦೦/-ರೂ.ಗಳ ದಂಡ ಹಾಗೂ ೨ವರ್ಷ ಜೈಲು ಶಿಕ್ಷೆ ಇರುತ್ತದೆ ಎಂದರು.
ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ದುಡಿಯುವ ಮಕ್ಕಳು ಕಂಡುಬAದಲ್ಲಿ ಮಕ್ಕಳ ಸಹಾಯವಾಣಿ-೧೦೯೮ಗೆ ಮಾಹಿತಿ ನೀಡಬಹುದಾಗಿದೆಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮುದುಕಪ್ಪ, ದೇವದುರ್ಗ ಕಾರ್ಮಿಕ ನಿರೀಕ್ಷಕ ಮಲ್ಲಪ್ಪ, ಶಿಕ್ಷಣ ಇಲಾಖೆಯ ಸಿ.ಆರ್.ಪಿ ಶಂಭುಲಿAಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹನುಮೇಶ ಸೇರಿದಂತೆ ಇತರರು ಇದ್ದರು.

About Mallikarjun

Check Also

ಜುಲೈ-೦೧ರಂದುಸಂಗಾಪುರದ ಐತಿಹಾಸಿಕ ಶ್ರೀ ಲಕ್ಷ್ಮಿ ನಾರಾಯಣ ಕೆರೆಯ ಒತ್ತುವರಿ ತೆರವುಗೊಳಿಸಲು ಸರ್ವೆ.

Survey to clear encroachment on historic Sri Lakshmi Narayana Lake in Singapore on July 1. …

Leave a Reply

Your email address will not be published. Required fields are marked *