Scholarship and Incentive Campaign by Social Welfare Department from September 1 to September 30
ಮಾನ್ವಿ: ಪರಿಶಿಷ್ಟಜಾತಿ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸಲು ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ,ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮ ಹಾಗೂ ಪ್ರೋತ್ಸಾಹಧನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಅತಿಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸುವಂತೆ ಮಾಡಲು ಹಾಗೂ ಯಾವುಧೇ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದಿಂದ ವಂಚಿತರಾಗದಂತೆ ಮಾಡಲು ಸೇ 1 ರಿಂದ ಸೇ30 ರವರೆಗೆ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹಧನ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಅರ್ಹ ವಿದ್ಯಾರ್ಥಿಗಳಿಗೆ ಇ-ಆಡಳಿತ ಕೇಂದ್ರದವರು ರೂಪಿಸಿರುವ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಮೂಲಕ ಮಂಜೂರು ಮಾಡಲಾಗುತ್ತಿದೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ದೂ.ಸಂಖ್ಯೆ 080-44554455ಗೆ ಕರೆ ಮಾಡಿ ಎಂದು ತಾ.ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ನಟರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.