Gangavati: Water esting through technology

ಗಂಗಾವತಿ ತಾಲೂಕಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ನಾಟಕ, ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆನವನ್ನು
ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಗಂಗಾವತಿ ಇವರುಗಳು ಜೆ.ಎಸ್.ಎಸ್ ಕನ್ನಡ ಮಾಧ್ಯಮ ಅನುದಾನಿತ ಪ್ರೌಢಶಾಲೆ ಗಂಗಾವತಿ ಯಲ್ಲಿ ದಿನಾಂಕ 03-09-2024ರಂದು ಆಯೋಜಿಸಲಾದ ‘ಗಂಗಾವತಿ ತಾಲೂಕಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ನಾಟಕ, ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗಳು 2024-25’ರಲ್ಲಿ ನಮ್ಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಕುಮಾರಿ ಶ್ರೀಯಾ ಆರ್. ಕುಮಾರಿ ವರ್ಷಾ ಹಾಗೂ ಕುಮಾರಿ ತನುಶ್ರೀ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿರುತ್ತಾರೆ. ಈ ವಿದ್ಯಾರ್ಥಿಗಳು ಮತ್ತು ಇವರಿಗೆ ತರಬೇತಿ ನೀಡಿದ ವಿಜ್ಞಾನ ಶಿಕ್ಷಕಿಯರಾದ ಶ್ರೀಮತಿ ಗೌರಿ, ಶ್ರೀಮತಿ ವಿದ್ಯಾ, ಶ್ರೀಮತಿ ನಿರೋಷಾ ಮತ್ತು ಕುಮಾರಿ ಸುಶ್ಮೀತಾ ಹಾಗೂ ಎಲ್ಲಾ ವಿಜ್ಞಾನ ಶಿಕ್ಷಕಿಯರುಗಳಿಗೆ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ಜಗನ್ನಾಥ ಆಲಂಪಲ್ಲಿ ರವರು ಶುಭಕೋರಿದರು.
Kalyanasiri Kannada News Live 24×7 | News Karnataka
