NDA candidate is sure to win in Channapatnam: Nikhil Kumaraswamy
ಕೊಪ್ಪಳ : ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಒಗ್ಗಟ್ಟಾಗಿವೆ. ರಾಷ್ಟ್ರನಾಯಕರು ಸೇರಿ ಮಾಡಿಕೊಂಡಿರುವ ಮೈತ್ರಿಯಾಗಿದ್ದು ಮುಂದೆಯೂ ಒಂದಾಗಿ ಚುನಾವಣೆ ಎದುರಿಸುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಹೇಳಿದರು.
ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ಎನ್ ಡಿ ಎ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತ ಪಡಿಸಿದರು.
ಅಭ್ಯರ್ಥಿಯಾರಾಗುತ್ತಾರೆ ಎಂಬ ಪ್ರಶ್ನೆಗೆ ಮಾತ್ರ ನೇರ ಉತ್ತರ ಹೇಳದೇ ಜಾರಿಕೊಂಡ ನಿಖಿಲ್ ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಎನ್ ಡಿ ಎ ಅಭ್ಯರ್ಥಿ ಗೆಲ್ಲುತ್ತಾರೆ ಗೆಲುವಿಗೆ ಶ್ರಮಿಸುತ್ತೇವೆ ಎಂದಷ್ಟೇ ಹೇಳಿದರು.
ಕರ್ನಾಟಕ ಪ್ರದೇಶ ಜಾತ್ಯತೀತ ಜನತಾದಳ ಕೊಪ್ಪಳ ಜಿಲ್ಲೆಯ ಘಟಕದಿಂದ ಹಮ್ಮಿಕೊಂಡಿರುವ ಸದಸ್ಯತ್ವ ನೋಂದಣಿ, ಬೂತ್ ಅಭಿಯಾನ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ ನಿಖಿಲ್ ಕುಮಾರಸ್ವಾಮಿ ಅವರು ಸುದ್ದಿಗಾರರೊಂದಿಗೆ ಪಕ್ಷದ ಸಂಘಟನೆ ಕುರಿತು ಕೆಲವು ವಿಚಾರಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಂಡೆoಪ್ಪ ಕಾಶoಪುರು, ವೆಂಕಟಗೌಡ ನಾಡಗೌಡರ್, ಹನುಮಂತಪ್ಪ, ಹಗರಿಬೊಮ್ಮನಹಳ್ಳಿ ಜೆಡಿಎಸ್ ಶಾಸಕ ನೇಮಿರಾಜ್ ನಾಯಕ್, ಮುಖಂಡರಾದ ಸುರೇಶ್ ಬಾಬು, ಸಿ ವಿ ಚಂದ್ರಶೇಖರ, ಮಹಾಂತಯ್ಯನಮಠ, ವಕ್ತಾರ ಮಲ್ಲನಗೌಡ ಕೋನನಗೌಡರ್, ಭೂಮರೆಡ್ಡಿ, ಶರಣಪ್ಪ ರಾಂಪುರ ಇತರ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.