School bus accident near Kapagal, Raichur – Minister NS Bhosaraju deeply condoled
ಬೆಂಗಳೂರು : ರಾಯಚೂರು ಜಿಲ್ಲೆಯ ಮಾನ್ವಿಯ ಲಯೋಲಾ ಶಾಲೆಯ ಬಸ್ ಹಾಗೂ ಸರಕಾರಿ ಬಸ್ Alarm ನಡೆದ ಅಪಘಾತದಲ್ಲಿ ಶಾಲಾ ಮಕ್ಕಳು ಮೃತಪಟ್ಟು ಹಲವಾರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತಗೊಂಡಿದ್ದೇನೆ.
ಬೆಳಿಗ್ಗೆ ಈ ಬಗ್ಗೆ ಸುದ್ದಿ ತಿಳಿದ ಕೂಡಲೇ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ .
ರಾಯಚೂರಿನ ಕಪಗಲ್ ಹತ್ತಿರ ಮಾನ್ವಿಯ ಖಾಸಗಿ ಶಾಲೆಯಾದ ಲೊಯೊಲ ಶಾಲೆಯ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತದ ವಿಷಯ ಆಘಾತವನ್ನುಂಟು ಮಾಡಿದೆ. ಗಾಯಗೊಂಡ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿಷಯ ತಿಳಿದ ಕೂಡಲೆ ಅಧಿಕಾರಿಗಳಿಗೆ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಕುರಿತು ವೈದ್ಯರಲ್ಲಿ ವಿಚಾರಿಸುವಂತೆ ಸೂಚಿಸಿದ್ದೇನೆ. ಈ ಬಗ್ಗೆ ಸನ್ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಕೂಡಲೇ ಪರಿಹಾರ ನೀಡುವಂತೆ ಹಾಗೂ ಚಿಕಿತ್ಸೆಯ ಹಣ ಭರಿಸುವಂತೆ ಸೂಚನೆ ನೀಡಲಾಗಿದೆ.
ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿರುವ ಸುದ್ದಿ ತಿಳಿದು ಮನಸ್ಸಿಗೆ ದುಃಖವಾಗಿದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ಇಂತಹ ಘಟನೆಗಳು ಮರುಕಳಿಸದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಮ್ಮ ಪತ್ರಿಕಾ ಪ್ರಕಟಣೆಮೂಲಕ ತಿಳಿಸಿದ್ದಾರೆ.