ಕಲ್ಯಾಣಸಿರಿ ವಿಶೇಷ

ರಾಯಚೂರು ಕಪಗಲ್‌ ಬಳಿ ಶಾಲಾ ವಾಹನ ಅಪಘಾತ – ಸಚಿವ ಎನ್‌ಎಸ್‌ಭೋಸರಾಜು ತೀವ್ರ ಸಂತಾಪ

School bus accident near Kapagal, Raichur – Minister NS Bhosaraju deeply condoled

ಬೆಂಗಳೂರು : ರಾಯಚೂರು ಜಿಲ್ಲೆಯ ಮಾನ್ವಿಯ ಲಯೋಲಾ ಶಾಲೆಯ ಬಸ್‌ ಹಾಗೂ ಸರಕಾರಿ ಬಸ್‌ Alarm ನಡೆದ ಅಪಘಾತದಲ್ಲಿ ಶಾಲಾ ಮಕ್ಕಳು ಮೃತಪಟ್ಟು ಹಲವಾರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತಗೊಂಡಿದ್ದೇನೆ.

ಬೆಳಿಗ್ಗೆ ಈ ಬಗ್ಗೆ ಸುದ್ದಿ ತಿಳಿದ ಕೂಡಲೇ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ .

ರಾಯಚೂರಿನ ಕಪಗಲ್ ಹತ್ತಿರ ಮಾನ್ವಿಯ‌ ಖಾಸಗಿ ಶಾಲೆಯಾದ ಲೊಯೊಲ ಶಾಲೆಯ ಬಸ್‌ ಮತ್ತು ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತದ ವಿಷಯ ಆಘಾತವನ್ನುಂಟು ಮಾಡಿದೆ. ಗಾಯಗೊಂಡ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿಷಯ ತಿಳಿದ ಕೂಡಲೆ ಅಧಿಕಾರಿಗಳಿಗೆ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಕುರಿತು ವೈದ್ಯರಲ್ಲಿ ವಿಚಾರಿಸುವಂತೆ ಸೂಚಿಸಿದ್ದೇನೆ. ಈ ಬಗ್ಗೆ ಸನ್ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಕೂಡಲೇ ಪರಿಹಾರ ನೀಡುವಂತೆ ಹಾಗೂ ಚಿಕಿತ್ಸೆಯ ಹಣ ಭರಿಸುವಂತೆ ಸೂಚನೆ ನೀಡಲಾಗಿದೆ.

ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿರುವ ಸುದ್ದಿ ತಿಳಿದು ಮನಸ್ಸಿಗೆ ದುಃಖವಾಗಿದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

ಇಂತಹ ಘಟನೆಗಳು ಮರುಕಳಿಸದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಮ್ಮ ಪತ್ರಿಕಾ ಪ್ರಕಟಣೆಮೂಲಕ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

11 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

11 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

11 hours ago