Breaking News

ಗಂಗಾವತಿ: ಯಶಸ್ವಿಯಾಗಿ ನಡೆದ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ.

Gangavati: Successfully conducted free health and eye check-up camp

ಜಾಹೀರಾತು

ಗಂಗಾವತಿ: ಶ್ರೀ ಮಂಜುನಾಥ ಆಸ್ಪತ್ರೆ ಗಂಗಾವತಿ, ಶ್ರೀ ಸ್ವಾಮಿ ವಿವೇಕಾನಂದ ಸೇವಾ ಸಂಘ (ರಿ) ಶ್ರೀರಾಮನಗರ, ವೈದೇಹಿ ಆಸ್ಪತ್ರೆ ಬೆಂಗಳೂರು ಹಾಗೂ ಐದೃಷ್ಟಿ ಕಣ್ಣಿನ ಆಸ್ಪತ್ರೆ ಹೊಸಪೇಟೆ ಇವರುಗಳ ಸಂಯುಕ್ತಾಶ್ರಯದಲ್ಲಿ ಗಂಗಾವತಿ ನಗರದ ಹೊಸಳ್ಳಿ ರಸ್ತೆಯ ಕನಕದಾಸ ವೃತ್ತದಲ್ಲಿರುವ ಶ್ರೀ ಮಂಜುನಾಥ ಆಸ್ಪತ್ರೆಯಲ್ಲಿ ಸೆಪ್ಟೆಂಬರ್-೫ ಗುರುವಾರ ಬೃಹತ್ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಶ್ರೀ ಮಂಜುನಾಥ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ|| ಶರಣಕುಮಾರ ಪ್ರಕಟಣೆಯಲ್ಲಿ ತಿಳಿಸಿದರು.
ಈ ಶಿಬಿರಕ್ಕೆ ಹೃದಯರೋಗ ಹಾಗೂ ಸಕ್ಕರೆ ಕಾಯಿಲೆ ತಜ್ಞರಾದ ಡಾ|| ಟಿ. ಕೃಷ್ಣಕುಮಾರ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ಸ್ವಾಮಿ ವಿವೇಕಾನಂದ ಸೇವಾ ಸಂಘದ ಅಧ್ಯಕ್ಷರಾದ ಜಿ. ರಾಮಕೃಷ್ಣ ವಹಿಸಿದ್ದರು.
ಈ ಶಿಬಿರದಲ್ಲಿ ಡಾ|| ಶರಣಕುಮಾರ ಮಾತನಾಡಿ, ಸಮಾಜದಲ್ಲಿ ಹಿಂದುಳಿದ ಹಾಗೂ ಬಡ ವರ್ಗದ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಇಂತಹ ಉಚಿತ ಆರೋಗ್ಯ ಹಾಗೂ ನೇತ್ರ ತಪಸಣಾ ಶಿಬಿರಗಳನ್ನು ಹಮ್ಮಿಕೊಳ್ಳುತ್ತಾ ಬರುತ್ತಿದ್ದು, ಈ ಶಿಬಿರದಲ್ಲಿ ಶಸ್ತçಚಿಕಿತ್ಸೆಗೆ ಆಯ್ಕೆಯಾಗುವ ರೋಗಿಗಳಿಗೆ ಉಚಿತವಾಗಿ ಶಸ್ತçಚಿಕಿತ್ಸೆ ಮಾಡಿಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸುತ್ತಾ, ಈ ಶಿಬಿರಕ್ಕೆ ಸಹಕಾರ ನೀಡಿದ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಶ್ರೀರಾಮನಗರ, ವೈದೇಹಿ ಆಸ್ಪತ್ರೆ ಬೆಂಗಳೂರು ಹಾಗೂ ಐದೃಷ್ಟಿ ಆಸ್ಪತ್ರೆ ಹೊಸಪೇಟೆರವರಿಗೆ ಅಭಿನಂದನೆ ಸಲ್ಲಿಸಿದರು.
ಈ ವೇಳೆ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷರಾದ ಜಿ. ರಾಮಕೃಷ್ಣ, ಬೆಂಗಳೂರಿನ ವೈದೇಹಿ ಆಸ್ಪತ್ರೆಯ ವೈದ್ಯರಾದ ಡಾ|| ಮಲ್ಲಿಕಾರ್ಜುನ, ಹೊಸಪೇಟೆಯ ಐದೃಷ್ಟಿ ಕಣ್ಣಿನ ಆಸ್ಪತ್ರೆಯ ವೈದ್ಯರಾದ ಡಾ|| ಸಂದೀಪ್, ಶ್ರೀ ಮಂಜುನಾಥ ಆಸ್ಪತ್ರೆಯ ವೈದ್ಯರಾದ ಡಾ|| ಕೃಷ್ಣಕುಮಾರ, ಡಾ|| ಶರಣಕುಮಾರ ಹಾಗೂ ಇತರೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

About Mallikarjun

Check Also

ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್ ಏಳು ವರ್ಷ ಜೈಲು ಶಿಕ್ಷೆ ಆದೇಶ

Gangavathi MLA Gali Janardhana Reddy sentenced to seven years in prison by CBI special court …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.