Minister NS Bhosaraju visits Rims Hospital, inquires about children’s health

ರಾಯಚೂರು,ಸೆ.08,(ಕರ್ನಾಟಕ ವಾರ್ತೆ):- ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹತ್ತಿರ ಸೆ.05ರ ಗುರುವಾರ ಕೆಎಸ್ಆರ್ಟಿಸಿ ಬಸ್-ಶಾಲಾ ವಾಹನ ನಡುವೆ ಅಪಘಾತ ಹಿನ್ನಲೆಯಲ್ಲಿ ಇಂದು (ಸೆ.08ರ ರವಿವಾರ) ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ನಗರದ ರಿಮ್ಸ್ ಹಾಗೂ ಸುರಕ್ಷಾ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳು ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು.

ಇದೇ ಸಂದರ್ಭದಲ್ಲಿ ನಗರಸಭೆಯ ಉಪಾಧ್ಯಕ್ಷರಾದ ಜಹಾನಿಯ ಸಾಜೀದ ಸಮೀರ್, ಜಿಲ್ಲಾ ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಜಿ.ಹರೀಶ್, ಜಿಲ್ಲಾ ರಿಮ್ಸ್ ನಿರ್ದೇಶಕ ರಮೇಶ, ಆಡಳಿತಾಧಿಕಾರಿ ಡಾ.ಕೆ.ಆರ್.ದುರುಗೇಶ್, ಜಿಲ್ಲಾ ಶಸ್ತ್ರ ಚಿಕಿತ್ಸೆಕರಾದ ಡಾ.ವಿಜಯಶಂಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಮಾನವಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ, ರಿಮ್ಸ್ ವೈದ್ಯಾಧಿಕಾರಿಗಳು ಹಾಗೂ ನಗರಸಭೆಯ ಸದಸ್ಯರು ಸೇರದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.