Accused of stealing 20 lakh rupees, gold saved for daughter’s wedding, disappeared.

ವರದಿ: ಬಂಗಾರಪ್ಪ .ಸಿ .
ಹನೂರು: ಮನೆ ಬಾಗಿಲು ಮುರಿದು ಮದುವೆಗೆ ಕೂಡಿಟ್ಟಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಕಳ್ಳರು ಕದ್ದೊಯ್ದ ಘಟನೆ ಹನೂರು ಪಟ್ಟಣದಲ್ಲಿ ಸೋಮವಾರ ತಡರಾತ್ರಿ ನಡೆದಿದೆ,
ಹನೂರು ಪಟ್ಟಣದ 11ನೇ ವಾರ್ಡ್ನ ನಿವಾಸಿ ಚಿನ್ನದೊರೆ ಎಂಬವರು ತಮ್ಮ ಮಗಳ ಮದುವೆ ಖರ್ಚಿಗಾಗಿ ಮನೆಯಲ್ಲಿ 20 ಲಕ್ಷ ನಗದು ಹಾಗೂ 500 ಗ್ರಾಂ ಚಿನ್ನ ಕೂಡಿಟ್ಟಿದ್ದರು. ಕಾರ್ಯನಿಮಿತ್ತ ತಮಿಳುನಾಡಿಗೆ ಹೋಗಿ ಸೋಮವಾರ ತಡರಾತ್ರಿ ವಾಪಸ್ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಚಾಮರಾಜನಗರದಿಂದ ಬೆರಳಚ್ಚು ತಜ್ಞರು ಸ್ಥಳಕ್ಕೆ ಆಗಮಿಸಿ ತಪಾಸಣೆ ನಡೆಸಿದ್ದಾರೆ. ಹನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ತನಿಖೆಗಾಗಿ ಕ್ರಮ ಕೈಗೊಂಡಿದ್ದಾರೆ.