Breaking News

ಸೇ.17 ರಂದು ತಾಲೂಕು ಆಡಳಿತ ವತಿಯಿಂದ ಕಲ್ಯಾಣ ಕರ್ನಾಟಕ ವಿಮೋಚನ ದಿನಾಚರಣೆ: ರಾಜು ಪಿರಂಗಿ

Kalyan Karnataka Liberation Day Celebration by Taluk Administration on September 17: Raju Pirangi

ಜಾಹೀರಾತು

ಮಾನ್ವಿ : ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ವಿಮೋಚನ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ರಾಜು ಪಿರಂಗಿ ಮಾತನಾಡಿ ಸೇ.17 ರಂದು ಕಲ್ಯಾಣ ಕರ್ನಾಟಕ ವಿಮೋಚನ ದಿನಾಚರಣೆಯ ಅಂಗವಾಗಿ ತಾಲೂಕಿನ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ರಾಷ್ಟ್ರಧ್ವಜರೋಹಣ ನೇರವೇ ರಿಸಬೇಕು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಬೆ.9 ಕ್ಕೆ ಶಾಸಕರ ನೇತೃತ್ವದಲ್ಲಿ ರಾಷ್ಟ್ರಧ್ವಜರೋಹಣ ನಡೆಯಲಿದೆ ಹಾಗೂ ವಿವಿಧ ಶಾಲೆಯ ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಉಪನ್ಯಾಸ ಕಾರ್ಯಕ್ರಮ ನಡೆಯಲ್ಲಿದ್ದು ತಾಲೂಕಿನ ವಿವಿಧ ಇಲಾಖೆಯ ಅಧಿ ಕಾರಿಗಳು ಹಾಗೂ ಜನಪ್ರತಿನಿಧಿ ಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು.ಪೂರ್ವಭಾವಿ ಸಭೆ ಯಲ್ಲಿ ಭೂಮಾಪನ ಇಲಾಖೆಯ ಅಧಿಕಾರಿ ನೂರ್ ಮಹಮ್ಮದ್ ಬಸವ ಕೇಂದ್ರದ ಕಾರ್ಯದರ್ಶಿ ಮೂಜೀಬ್, ನಿವೃತ್ತ ಶಿಕ್ಷಕರಾದ ಕರ್ಕಿಹಳ್ಳಿ ರವರು ಅಗತ್ಯ ಸಲಹೆ ಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪುರಸಭೆ ವ್ಯವಸ್ಥಾಪಕರಾದ ಕೆ.ನರಸಿಂಹ, ಆರೋಗ್ಯ ನಿರೀಕ್ಷರಾದ ಮಹೇಶ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

About Mallikarjun

Check Also

ದೇಶದಲ್ಲಿಅಧಿಕಾರಶಾಹಿ ಪದ್ಧತಿನಿರ್ಮೂಲವಾಗಬೇಕು : ಡಾ.ಕೆ ಎಸ್ ಜನಾರ್ದನ್

Bureaucracy should be eradicated in the country: Dr. KS Janardhan ಕೊಟ್ಟೂರು : ಪಟ್ಟಣದ ಪ್ರವಾಸಿ ಮಂದಿರದಲ್ಲಿ  …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.