Breaking News

ಮಾನವ ಸರಪಳಿ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಿ: ನಲಿನ್ ಅತುಲ್

All join hands for human chain programme: Nalin Atul

ಜಾಹೀರಾತು

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ

ಕೊಪ್ಪಳ, ಸೆಪ್ಟೆಂಬರ್ 12 (ಕರ್ನಾಟಕ ವಾರ್ತೆ): ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಮಾನವ ಸರಪಳಿಯ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.


ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮ ನಿಮಿತ್ತ ಜಿಲ್ಲಾ ಪಂಚಾಯತ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸೆಪ್ಟೆಂಬರ್ 12ರಂದು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಯ ಅಧಿಕಾರಿಗಳು, ಮತ್ತು ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಸರ್ವ ಸದಸ್ಯರು ಹಾಗೂ ಇತರ ಜನಪ್ರತಿನಿಧಿಗಳಿಗೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೆ.15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಕೊಪ್ಪಳ ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಮಾನವ ಸರಪಳಿ ಕಾರ್ಯಕ್ರಮ ಹಾದುಹೋಗುವ ಗ್ರಾಮ ಪಂಚಾಯತಿ, ನಗರ ಪ್ರದೇಶದ ಎಲ್ಲ ಪ್ರಾಥಮಿಕ ಶಾಲೆಗಳ 06 ರಿಂದ 10ನೇ ತರಗತಿ, ಪಿಯುಸಿ, ಪದವಿ ವಿದ್ಯಾರ್ಥಿಗಳು, ಗ್ರಾಮ ಪಂಚಾಯತಿ ಮತ್ತು ನಗರಸಭೆ ಪಟ್ಟಣ ಪಂಚಾಯತಿ ಚನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯತಿಯ ಮಹಿಳಾ ಒಕ್ಕೂಟದ ಸದಸ್ಯರು, ನಗರ ಪ್ರದೇಶದ ವಿವಿಧ ಮಹಿಳಾ ಒಕ್ಕೂಟದ ಸದಸ್ಯರು, ನರೇಗಾ ಕೂಲಿಕಾರರು, ಸಹಕಾರ ಸಂಘಗಳ ಸದಸ್ಯರು, ಮತ್ತು ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು, ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳು, ಜಿಲ್ಲೆಯ ಎಲ್ಲ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸರ್ವ ಸಿಬ್ಬಂದಿ ಸಾರ್ವಜನಿಕರು, ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತೀರುವ ಕಾರ್ಮಿಕರು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಯ ಅಧಿಕಾರಿಗಳು, ಮತ್ತು ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಸರ್ವ ಸದಸ್ಯರು ಹಾಗೂ ಇತರ ಜನಪ್ರತಿನಿಧಿಗಳು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಸೇರಿದಂತೆ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಸರ್ವ ಸದಸ್ಯರಗಳು ಹಾಗೂ ವಿವಿಧ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.

About Mallikarjun

Check Also

ಜೆಜೆಎಂ ಕಾಮಗಾರಿ ಅವೈಜ್ಞಾನಿಕ :ಮಳೆ ನೀರು ಗ್ರಾಮದೊಳಕ್ಕೆ ಸಾರ್ವಜನಿಕರಆಕ್ರೋಶ

JJM’s work is unscientific: Public outrage over rain water in the village ವರದಿ : ಪಂಚಯ್ಯ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.