All participate in historic human chain formation: Koppal district administration plea

ಕೊಪ್ಪಳ, ಸೆಪ್ಟೆಂಬರ್ 12 (ಕರ್ನಾಟಕ ವಾರ್ತೆ): ಐತಿಹಾಸಿಕ ಮಾನವ ಸರಪಳಿ ರಚನೆಯಲ್ಲಿ ಎಲ್ಲರೂ ಭಾಗವಹಿಸುವಂತೆ ಕೊಪ್ಪಳ ಜಿಲ್ಲಾಡಳಿತವು ಜಿಲ್ಲೆಯ ಎಲ್ಲಾ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಸೆಪ್ಟೆಂಬರ್ 15ರಂದು ಬೆಳಿಗ್ಗೆ 09 ರಿಂದ 10 ಗಂಟೆಯವರೆಗೆ ರಾಜ್ಯದ ಬೀದರ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆಯವರೆಗೆ ಒಟ್ಟು 2500 ಕಿ.ಮೀ ಮಾನವ ಸರಪಳಿ ರಚನೆಯ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತದೆ.
ಪ್ರಜಾಪ್ರಭುತ್ವವು ಸಮಾನತೆ, ಸ್ವಾತಂತ್ರ‍್ಯ ಮತ್ತು ಭಾತೃತ್ವದ ಭದ್ರ ಬುನಾದಿ ಮೇಲೆ ನಿಂತಿದೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿವಸ ದೇಶದ ನಾಗರಿಕರಿಗೆ ಅದರಲ್ಲೂ ವಿಶೇಷವಾಗಿ ಕರ್ನಾಟಕ ನಾಗರಿಕರಿಗೆ ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸಲು ಕೊಪ್ಪಳ ಜಿಲ್ಲೆಯಲ್ಲಿ ಕೊಪ್ಪಳ ತಾಲ್ಲೂಕಿನ ಬೆಳಗಟ್ಟಿ ಗ್ರಾಮದಿಂದ ಪ್ರಾರಂಭವಾಗಿ, ಹಿರೇಸಿಂದೋಗಿ, ಚಿಕ್ಕಸಿಂದೋಗಿ, ಕೊಪ್ಪಳ ನಗರ, ಗಿಣಿಗೇರಾ, ಹೊಸಳ್ಳಿ ಮಾರ್ಗವಾಗಿ ಕೊಪ್ಪಳ ಭೌಗೋಳಿಕ ಸರಹದ್ದಾದ ಮುನಿರಾಬಾದ್ ಡ್ಯಾಮ್ ವರೆಗೆ ಜಿಲ್ಲೆಯಲ್ಲಿ ಒಟ್ಟು 53 ಕಿಮೀ ಮಾನವ ಸರಪಳಿಯನ್ನು ನಿರ್ಮಿಸುವದರ ಮೂಲಕ ಆಚರಣೆ ಮಾಡಲಾಗುತ್ತದೆ.
ಈ ದಿನದಂದು ಎಲ್ಲರೂ ಭಾಗವಹಿಸಿ ಕೊಪ್ಪಳ ಜಿಲ್ಲೆಯಲ್ಲಿ ಮಾನವ ಸರಪಳಿ ಯಶಸ್ವಿಗೊಳಿಸಲು ಕೊಪ್ಪಳ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ ಪ್ರಜಾಪ್ರಭುತ್ವದ ಆಶಯಗಳನ್ನು ಈಡೇರಿಸೋಣ ಎಂದು ಪ್ರಕಟಣೆ ತಿಳಿಸಿದೆ.
Kalyanasiri Kannada News Live 24×7 | News Karnataka
