Breaking News

ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ಕಾರ್ಯಕ್ರಮಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಿ; ಡಾ.ರೋಣಿ

Concluding Ceremony Program of State Level Training Workshop
Empower women economically; Dr. Roni

ಜಾಹೀರಾತು


ರಾಯಚೂರು,,(ಕರ್ನಾಟಕ ವಾರ್ತೆ):- ಜಿಲ್ಲೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವಲ್ಲಿ ತಾಲೂಕು ಸಂಪನ್ಮೂಲ ವ್ಯಕ್ತಿಗಳು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ ಅವರು ಹೇಳಿದರು.

ಅವರು ಸೆ.೧೧ರ ಬುಧವಾರ ದಂದು ನಗರದ ಆಶಾಪೂರ ರಸ್ತೆಯಲ್ಲಿರುವ ಆರ್.ಸೆ.ಟಿ ತರಬೇತಿ ಕೇಂದ್ರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾ ಪಂಚಾಯತ್ ರಾಯಚೂರು, ಕುಡುಂಬ ಶ್ರೀಎನ್.ಆರ್.ಒ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪಂಚಾಯತ್ ರಾಜ್ ಸಂಸ್ಥೆ ಮತ್ತು ಸಮುದಾಯ ಆಧಾರಿತ ಸಂಸ್ಥೆಗಳ ಒಗ್ಗೂಡಿಸುವಿಕೆಯ ಅಡಿಯಲ್ಲಿ ತಾಲೂಕು ಸಂಪನ್ಮೂಲ ವ್ಯಕ್ತಿಗಳಿಗೆ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿದರು.
ಸ್ವ-ಸಹಾಯ ಗುಂಪಿನ ಮಹಿಳೆಯರನ್ನು ಆರ್ಥಿಕವಾಗಿ ಸಬಲರಾಗಿಸಿ, ಉತ್ತಮ ಜೀವನ ಮಟ್ಟ ಹೊಂದಲು ಪುರುಷರೇ ಹೆಚ್ಚು ದುಡಿಮೆಯಲ್ಲಿ ನಿರತರಾಗಿದ್ದಾರೆ. ಶಿಕ್ಷಿತ ಮಹಿಳೆಯರು ಅತ್ಯುನ್ನತ ಹುದ್ದೆಗಳಿಗೇರುತ್ತಿದ್ದಾರೆ. ಶಿಕ್ಷಣದಿಂದ ವಂಚಿತರಾದವರು ಟೈಲರಿಂಗ್, ಬ್ಯುಟೀಷಿಯನ್ ಕೌಶಲಗಳ ಅಭಿವೃದ್ಧಿಗಳಂತಹ ಅವಕಾಶಗಳನ್ನು ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರವು ವಿವಿಧ ಸೌಲಭ್ಯಗಳನ್ನು ಗ್ರಾಮೀಣ ಪ್ರದೇಶದಲ್ಲಿರುವ ಸ್ವ-ಸಹಾಯ ಗುಂಪುಗಳಿಗೆ ಒದಗಿಸಲಾಗಿದೆ. ಉದ್ಯಮ ವಲಯದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಮಾಹಿತಿ ತಲುಪಿಸಿ ಉದ್ಯಮಶೀಲರನ್ನಾಗಿ ಮಾಡುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡಬೇಕು ಎಂದು ತಿಳಿಸಿದರು.
ಎನ್.ಆರ್.ಎಲ್.ಎಮ್ ರಾಜ್ಯ ಕಾರ್ಯಕ್ರಮದ ವ್ಯವಸ್ಥಾಪಕರಾದ ಬೆಳ್ಳೇಗೌಡ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಉತ್ತಮ ಸಾಧನೆಯನ್ನು ಮಾಡುತ್ತಿದ್ದಾರೆ. ಮಾತ್ರವಲ್ಲದೆ ಕೇಂದ್ರ ಸರ್ಕಾರವು ಮಹಿಳೆಯರ ಅಭಿವೃದ್ಧಿಯ ದೃಷ್ಟಿಯಿಂದ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದನ್ನು ಮಹಿಳೆಯರು ಸದ್ಬಳಕೆ ಮಾಡಬೇಕು ಎಂದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸಲು ಹಲವಾರು ಕಾರ್ಯಕ್ರಮ ಸರಕಾರದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಗ್ರಾಮಗಳಲ್ಲಿ ವಿವಿಧ ಇಲಾಖೆಗಳಿಂದ ಮತ್ತು ಸ್ವಯಂ ಸೇವಾ ಸಂಸ್ಥೆಗಳಿAದ ರಚಿಸಲ್ಪಟ್ಟಿರುವ ಸ್ವ-ಸಹಾಯ ಸಂಘಗಳು ಕುಟುಂಬದ, ಸಮುದಾಯದ ಮತ್ತು ಗ್ರಾಮದ ಅಭಿವೃದ್ಧಿಯಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಿದೆ ಎಂದರು.
ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಬ್ಯಾಂಕ್ ಸಂಪರ್ಕ ಕಲ್ಪಿಸಬೇಕು. ಬ್ಯಾಂಕ್‌ನಿAದ ದೊರಕುವ ವಿವಿಧ ಸೌಲಭ್ಯಗಳನ್ನು ಮಹಿಳೆಯರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಆರ್.ಸೆ.ಟಿ. ನಿರ್ದೇಶಕರಾದ ವಿಜಯ ಕುಮಾರ ಬಡಿಗೇರ, ಜಿಲ್ಲಾ ವ್ಯವಸ್ಥಾಪಕರಾದ ವಿಜಯ ಕುಮಾರ, ಕುಟುಂಬ ಶ್ರೀ ಸಂಸ್ಥೆಯ ರಾಜ್ಯ ಸಂಯೋಜಕರಾದ ಧನೇಶ್ವರ ಯಾದವ್, ಧೀರೇಂದ್ರ ಶುಕ್ಲಾ, ಅಜೀಶ್, ಜ್ಯೋತಿ ವಿವಿಧ ಜಿಲ್ಲೆಯ ತಾಲೂಕು ಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದರು.

About Mallikarjun

Check Also

ದಸರಾ ಮಹೋತ್ಸವದ ಅಂಗವಾಗಿ ಕಲ್ಮಠದಲ್ಲಿ ಸರ್ವಧರ್ಮ ಸಮ್ಮೇಳನ

Interfaith conference in Kalmath as part of Dussehra celebrations ಮಾನ್ವಿ: ಪಟ್ಟಣದ ಮುಕ್ತಾಗುಚ್ಚ ಬೃಹನ್ಮಠದಲ್ಲಿ 49 ನೇ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.