Breaking News

ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಬಳಿ ಕೈಗೊಂಡಿರುವ ಅಭಿವೃದ್ಧಿಕಾಮಗಾರಿಗಳ ಪ್ರಗತಿ ಪರಿಶೀಲನೆ

Review the progress of the development works undertaken near the historical tourist spots of the district

ಜಾಹೀರಾತು

ಕೊಪ್ಪಳ ಸೆಪ್ಟೆಂಬರ್ 12 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಬಳಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಇತರೆ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 11ರಂದು ಸಭೆ ನಡೆಸಲಾಯಿತು.
ಇದೇ ವೇಳೆ ಜಿಲ್ಲಾಧಿಕಾರಿಗಳು ಮಾತನಾಡಿ, ಕೊಪ್ಪಳ ಜಿಲ್ಲೆಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿ, ಹುಲಿಗೆಮ್ಮ ದೇವಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ,ಕೇಂದ್ರ ಮತ್ತು ರಾಜ್ಯ ಪುರಾತತ್ವ ಇಲಾಖೆ ಅಧೀನದಲ್ಲಿರುವ ಸ್ಮಾರಕಗಳನ್ನು ಗುರುತಿಸಿ ಅವುಗಳನ್ನು ಅಭಿವೃದ್ಧಿಪಡಿಸಿ ವಿವಿಧ ರಾಜ್ಯಗಳ ಹಾಗೂ ಸ್ಥಳೀಯ ಪ್ರವಾಸಿಗರನ್ನು ಆಕರ್ಷಿಸಲು ಅಗತ್ಯ ಕ್ರಮ ವಹಿಸುವಂತೆ ಭಾಗವಹಿಸಿದ್ದ ಅಧಿಕಾರಿಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳು ಸೂಚಿಸಿದರು. ಕೊಪ್ಪಳ ನಗರದ ಹುಲಿಕೆರೆ ಅಭಿವೃದ್ಧಿ ಸಾಣಾಪುರ ಕೆರೆ ಭಾಗದಲ್ಲಿ ವಾಟರ್ ಸ್ಪೋರ್ಟ್ಸ್ ಅಡ್ವೆಂಚರ್ಸ್ ರಾಕ್ ಕ್ಲೈಂಬಿಂಗ್ ಹಾಗೂ ಏಕೊ ಟೂರಿಸಂ ಮುಂತಾದ ಪ್ರವಾಸಿ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಹಾಗೂ ಕೊಪ್ಪಳ ಬ್ರಾಂಡ್ ಯೋಜನೆ ಅಡಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಈಗಾಗಲೇ ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ (ಎನ್ಐಸಿ ) ಕೊಪ್ಪಳ ರವರು ಕೊಪ್ಪಳ ಬ್ರಾಂಡ್ ವೆಬ್ಸೈಟ್ ತಯಾರಿಸಲಾಗಿದ್ದು ಕೊಪ್ಪಳ ಜಿಲ್ಲೆಯ ಪ್ರವಾಸಿ ತಾಣಗಳನ್ನು ಸಾರ್ವಜನಿಕರಿಗೆ ಪ್ರಚಾರಪಡಿಸಲು ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿಯೊಂದಿಗೆ ಛಾಯಾಚಿತ್ರ ಹಾಗೂ ವೀಡಿಯೊಗಳನ್ನ ಕೊಪ್ಪಳ ಬ್ರಾಂಡ್ ವೆಬ್‌ಸೈಟ್‌ನಲ್ಲಿ ಅಳವಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಆನೆಗೊಂದಿ ಉತ್ಸವ ನಡೆಯುವ ಪ್ರದೇಶದಲ್ಲಿರುವ ಸರ್ಕಾರಿ ಭೂಮಿಯ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ಗಂಗಾವತಿ ತಹಶಿಲ್ದಾರರು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಗಂಗಾವತಿ ಹಾಗೂ ಕನಕಗಿರಿ ತಾಲ್ಲೂಕುಗಳು ಸೇರಿದಂತೆ ಇನ್ನಿತರ ಜಮೀನಿನ ಸಮಸ್ಯೆಗಳಿದ್ದಲ್ಲಿ ಶೀಘ್ರವಾಗಿ ಇತ್ಯರ್ಥಗೊಳಿಸಲು ಆಯಾ ತಹಶಿಲ್ದಾರರು ಕ್ರಮ ವಹಿಸಬೇಕು. ಶೀಘ್ರವಾಗಿ ಕಾಮಗಳನ್ನು ಪೂರ್ಣಗಳಿಸುವಂತೆ ಕೆ.ಆರ್.ಐ.ಡಿ.ಎಲ್ ಅನುಷ್ಠಾನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಕೊಪ್ಪಳ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಹೇಮಂತ್ ಕುಮಾರ್, ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪಾಧಿಕಾರದ ಆಯುಕ್ತರಾದ ಕೆ.ರಂಗನಾಥ, ಕೊಪ್ಪಳ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಡಿ.ನಾಗರಾಜ ಸೇರಿದಂತೆ, ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶಿಲ್ದಾರರು, ಕಂದಾಯ ನಿರೀಕ್ಷಕರು ಹಾಗೂ ಕಾಮಗಾರಿಗಳ ಅನುಷ್ಠಾನ ಏಜೆನ್ಸಿಯವರು ಉಪಸ್ಥಿತರಿದ್ದರು.

About Mallikarjun

Check Also

ತೆಲಗಿ ಮಾದರಿಯಲ್ಲಿ ಮತ್ತೊಂದು ಭಾರೀ ನಕಲಿ ಛಾಪಾ ಕಾಗದ ಹಗರಣ

Another massive fake printing paper scam on the Telugu model ಕಾನೂನು ಬಾಹಿರ ಫ್ರಾಂಕಿಂಗ್ ಮೂಲಕ ಸರ್ಕಾರದ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.