Sri Vishwakarma Jayanti at Koppal on 18th September
ಕೊಪ್ಪಳ, ಸೆಪ್ಟೆಂಬರ್ 12 (ಕರ್ನಾಟಕ ವಾರ್ತೆ):
ಕೊಪ್ಪಳ ಜಿಲ್ಲಾಡಳಿತದಿಂದ ಶ್ರೀ ವಿಶ್ವಕರ್ಮ ಜಯಂತಿಯನ್ನು ಸೆಪ್ಟೆಂಬರ್ 18ರಂದು ಬೆಳಿಗ್ಗೆ 11ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ ತುಂಗಭದ್ರ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಿದ (ಕಾಡಾ) ಅಧ್ಯಕ್ಷರಾದ ಹಸನ್ ಸಾಬ್ ನಬೀಬ್ ಸಾಬ್ ದೋಟಿಹಾಳ, ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಬೆಂಗಳೂರು ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ ರಾಜ್ ಅವರು ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಹೀರೆಸಿಂದೋಗಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ವೀರಶೇಖರ ಬಿ ಪತ್ತಾರ ಅವರು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ರಾಮ್ ಎಲ್ ಅರಿಸಿದ್ದಿ ಅವರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.