Breaking News

ದೇಹದಾನಕ್ಕೆ ಪ್ರೇರಣೆ ನೀಡಿದ ವೃದ್ಧ ದಂಪತಿ

An elderly couple who inspired bodybuilding

ಜಾಹೀರಾತು


ರಾಯಚೂರು,ಸೆ.09,():- ಜಿಲ್ಲೆಯ ಮಾನವಿ ಪಟ್ಟಣದ ವೃದ್ಧ ದಂಪತಿಗಳು ತಮ್ಮ ಮರಣದ ನಂತರ ದೇಹಗಳನ್ನು ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸ್ವಯಂ ಪ್ರೇರಿತವಾಗಿ ದೇಹದಾನ ಮಾಡಿದ್ದಾರೆ ಎಂದು ರಿಮ್ಸ್ ಆಸ್ಪತ್ರೆಯ ನಿರ್ದೇಶಕರು ತಿಳಿಸಿದ್ದಾರೆ.

81 ವರ್ಷದ ಕೆ.ಸಿದ್ದಯ್ಯ ಮಾನವಿ ಮತ್ತು 75 ವರ್ಷದ ಅವರ ಪತ್ನಿ ಶ್ರೀಮತಿ ಕೆ.ಪಾರ್ವತಿ ಅವರು ತಮ್ಮ ದೇಹಗಳನ್ನು ವೈದ್ಯಕೀಯ ವಿದ್ಯಾರ್ಥಿಗಳ ಕಲಿಕೆಗೆ ದಾನ ಮಾಡಲು ಸ್ವಯಂ ಪ್ರೇರಿತವಾಗಿ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಒಪ್ಪಿಗೆ ಪತ್ರಗಳಿಗೆ ಸಹಿ ಮಾಡಿದ್ದಾರೆ. ವೈದ್ಯಕೀಯ ಶಿಕ್ಷಣಕ್ಕಾಗಿ ದಾನ ಮಾಡುವುದು ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವೆಂದು ಅವರು ನಂಬಿದ್ದಾರೆ.

ಅವರ ಈ ತ್ಯಾಗದ ನಿರ್ಧಾರವು ರಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಮೂಲ್ಯವಾದ ಪ್ರಾಯೋಗಿಕ ಅನುಭವವನ್ನು ಒದಗಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ದೇಹದಾನದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದರ ಜೊತೆಗೆ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗುತ್ತದೆ ಎಂದು ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಂಗ ರಚನಾಶಾಸ್ತç ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About Mallikarjun

Check Also

ಕಲ್ಯಾಣ ಕರ್ನಾಟಕ ಉತ್ಸವ ದಿನ: ನಿವೇಶನ ಹಕ್ಕು ಪತ್ರ ವಿತರಣೆ

Kalyan Karnataka Festival Day: Land Title Deed Distribution ಕೊಪ್ಪಳ ಸೆಪ್ಟೆಂಬರ್ 18 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದಿಂದ ಸೆ.17ರಂದು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.