Breaking News

ಅಕ್ಟೋಬರ್ 19 ಮತ್ತು 20 ಎರಡುದಿನ ಸ್ವಾಭಿಮಾನಿ ಕಲ್ಯಾಣ ಪರ್ವ

October 19 and 20 is a two-day Swabhimani Kalyan Parva

ಜಾಹೀರಾತು

ಭಾಗವಹಿಸಲು ಚನ್ನಬಸವಾನಂದ ಶ್ರೀ ಕರೆ

ಬೀದರ: ಬಸವ ಧರ್ಮ ಪೀಠದ ಸ್ವಾಭಿಮಾನಿ ಶರಣರ ಬಳಗದ ವತಿಯಿಂದ ಅಕ್ಟೋಬರ್ 19 ಮತ್ತು 20 ರಂದು ಶರಣ ಭೂಮಿ ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜಿಸಲಾಗಿದೆ. ‌ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ಶರಣ ಶರಣೆಯರು ರು ಪಾಲ್ಗೊಳ್ಳುತಿದ್ದಾರೆ ಎಂದು ಬೆಂಗಳೂರಿನ ಬಸವ ಗಂಗೋತ್ರಿಯ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷರಾದ ಪೂಜ್ಯ ಶ್ರೀ ಜಗದ್ಗುರು ಡಾ. ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಗುರುವಾರ ಹಮ್ಮಿಕೊಂಡ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.


ಅ. 19 ರ ಬೆ. 11 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ಅಂದು ಬೆಳಿಗ್ಗೆ 5 ಗಂಟೆಗೆ ಸುಪ್ರಭಾತ ಸಮಯದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ, ಬಸವ ಚಿಂತನ ಪ್ರಭೆಯ ಮೂಲಕ ವೇದಿಕೆಯ ದೈವೀಕರಣ ನಡೆಯಲಿದೆ. ಅಂದು ಸಾ. 5 ಗಂಟೆಗೆ ಧರ್ಮಚಿಂತನ ಗೋಷ್ಠಿ- 1 ಜರುಗಲಿದೆ.
ಅ. 20 ರಂದು ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಇಷ್ಟಲಿಂಗ ಪೂಜೆ ಹಾಗೂ ಬೆ. 10-30 ಕ್ಕೆ ಶರಣ ವಂದನೆ 770 ಶರಣರಿಗೆ ಶರಣಾರ್ಥಿ ಹೃದಯಸ್ಪರ್ಶಿ ಕಾರ್ಯಕ್ರಮ ನಡೆಯಲಿದೆ. ಮ. 12 ರಿಂದ 2 ರ ವರೆಗೆ ಮಹಿಳಾಗೋಷ್ಠಿ ಮ. 3 ರಿಂದ 5 ರ ವರೆಗೆ ಯುವಗೋಷ್ಠಿ ಹಾಗೂ ಸಾಯಂಕಾಲ ಸಮಾರೋಪ ಸಮಾರಂಭ ಜರುಗಲಿದೆ. ಆಗಮಿಸುವ ಸಾವಿರಾರು ಶರಣರಿಗೆ ಪ್ರಸಾದ, ವಸತಿ ವ್ಯವಸ್ಥೆ ಇರಲಿದೆ. ಆದ್ದರಿಂದ ಶರಣ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಶ್ರೀಗಳು ತಿಳಿಸಿದರು.
ಬೀದರ ಬಸವ ಮಂಟಪದ ಸಂಚಾಲಕರು ಹಾಗೂ ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕಾ ಮಹಿಳಾ ಗಣದ ರಾಷ್ಟ್ರೀಯ ಅಧ್ಯಕ್ಷೆ ಪೂಜ್ಯ ಶ್ರೀ ಸದ್ಗುರು ಸತ್ಯಾದೇವಿ ಮಾತಾಜಿ ಮಾತನಾಡಿ ಸ್ವಾಭಿಮಾನಿ ಕಲ್ಯಾಣ ಪರ್ವ ಎಂದರೆ ಇದೊಂದು ಕಲ್ಯಾಣದ ಹಬ್ಬ. ಪ್ರತಿಯೊಬ್ಬರೂ ಭಾಗವಹಿಸುವುದು ತಮ್ಮ ಆದ್ಯ ಕರ್ತವ್ಯ. ಮಹಿಳಾ ಗೋಷ್ಠಿಯಲ್ಲಿ ಮಹಿಳೆಯರ ಜ್ವಲಂತ ಸಮಸ್ಯೆಗಳು ಹಾಗೂ ಇತರೆ ವಿಷಯಗಳ ಚರ್ಚೆ ನಡೆಯಲಿದೆ. ಹೀಗಾಗಿ ಶರಣ ಬಂಧುಗಳು ತನು, ಮನ, ಧನ, ಸಮಯ, ಅಭಿಮಾನ ದಾಸೋಹ ಮಾಡಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಿದರು.
ಸುದ್ದಿಗೋಷ್ಠಿಯಲ್ಲಿ ಲಿಂಗಾಯತ ಧರ್ಮ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ ಪಾಟೀಲ ಅತಿವಾಳ, ರಾಷ್ಟ್ರೀಯ ಬಸವ ದಳದ ಜಿಲ್ಲಾ ಉಪಾಧ್ಯಕ್ಷ ಶಿವಶರಣಪ್ಪ ಪಾಟೀಲ ಹಾರೂರಗೇರಿ, ಲಿಂಗಾಯತ ಧರ್ಮ ಮಹಾಸಭಾದ ಔರಾದ ತಾಲೂಕಾಧ್ಯಕ್ಷ ಕಲ್ಲಪ್ಪ ದೇಶಮುಖ, ಪ್ರಮುಖರಾದ ಬಸವಂತರಾವ ಬಿರಾದಾರ, ರವಿಕಾಂತ ಬಿರಾದಾರ, ನಿರ್ಮಲಾ ನಿಲಂಗೆ, ಮಲ್ಲಿಕಾರ್ಜುನ ಬಿರಾದಾರ ಸಂಗಮ, ಮಲ್ಲಿಕಾರ್ಜುನ ಶಹಾಪುರ, ಓಂಪ್ರಕಾಶ ರೊಟ್ಟೆ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

About Mallikarjun

Check Also

ಎಸ್ಸಿ ಎಸ್ಟಿ ಮೀನುಗಾರರಿಗೆ ವಾಹನ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Applications invited for subsidy for SC/ST fishermen to purchase vehicles ಕೊಪ್ಪಳ ಆಗಸ್ಟ್ 30 (ಕರ್ನಾಟಕ ವಾರ್ತೆ): …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.