Kalyan Karnataka Festival Day on 17th September
ಕೊಪ್ಪಳ, ಸೆಪ್ಟಂಬರ್ 14 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಸೆಪ್ಟಂಬರ್ 17 ರಂದು ಬೆಳಿಗ್ಗೆ 9ಕ್ಕೆ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಧ್ವಜಾರೋಹಣ ನಡೆಸುವರು. ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮಾನ್ಯ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ಗಂಗಾವತಿ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಜಿ. ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ, ಹೇಮಲತಾ ನಾಯಕ, ತುಂಗಭದ್ರ ಯೋಜನೆ ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್‌ಸಾಬ್ ನಬೀಬ್ ಸಾಬ್ ದೋಟಿಹಾಳ, ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಎಸ್.ಎಂ. ಪಟೇಲ್, ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತ ಬೆಂಗಳೂರದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ. ಮೋಹನ್‌ರಾಜ್, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ, ಡಾ.ರಾಮ್ ಎಲ್. ಅರಸಿದ್ದಿ ಉಪಸ್ಥಿತರಿರುವರು.