Breaking News

ವಡ್ಡರಹಟ್ಟಿಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನ ಅಂಗವಾಗಿ ಶ್ರಮದಾನ

Shram Donation as part of Swachhata Hi Seva Abhiyan in Waddarahatti

ಜಾಹೀರಾತು

ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿಗ್ರಾಪಂ ಪಿಡಿಓ ಸುರೇಶ ಚಲವಾದಿ ಹೇಳಿಕೆ

ಗಂಗಾವತಿ : ತಾಲೂಕಿನ ವಡ್ಡರಹಟ್ಟಿ ಗ್ರಾಮದ ಯಲ್ಲಮ್ಮ ದೇವಸ್ಥಾನ ರಸ್ತೆಯಲ್ಲಿ ಸ್ವಚ್ಛತಾ ಹೀ ಸೇವಾ (ಸ್ವಚ್ಛತಾ ಸೇವಾ) ಅಭಿಯಾನ ಅಂಗವಾಗಿ ಗ್ರಾಪಂ ವತಿಯಿಂದ ಶ್ರಮದಾನ ಕಾರ್ಯ ಶನಿವಾರ ನಡೆಯಿತು.

ಈ ವೇಳೆ ಗ್ರಾಪಂ ಪಿಡಿಓ ಸುರೇಶ ಚಲವಾದಿ ಅವರು ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಜನುಮದಿನ ಅಂಗವಾಗಿ ಅವರಿಗೆ ಗೌರವ ಸಲ್ಲಿಸಲು ಸೆ.14 ರಿಂದ ಅಕ್ಟೋಬರ್ 1 ರವರೆಗೆ ಸ್ವಚ್ಛತಾ ಹೀ ಸೇವಾ ಅಭಿಯಾನ ನಡೆಯಲಿದೆ. ಪ್ರತಿ ದಿನ ಒಂದೊಂದು ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು ಸಾರ್ವಜನಿಕರಿಗೆ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. ಗ್ರಾಮಸ್ಥರು, ಯುವಕರು ಸ್ವಯಂ ಪ್ರೇರಣೆಯಿಂದ ಪಾಲ್ಗೊಂಡು ಶ್ರಮದಾನ ಮಾಡಬೇಕು ಎಂದರು.

ಗ್ರಾಮದಲ್ಲಿ ಸ್ವಚ್ಛತೆ ಕಾಪಾಡುವುದು ಎಲ್ಲರ ಕರ್ತವ್ಯವಾಗಿದ್ದು, ಸ್ವಚ್ಚ ಗ್ರಾಮ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.

ವಡ್ಡರಹಟ್ಟಿ ಗ್ರಾಮದ ಯಲ್ಲಮ್ಮ ದೇವಸ್ಥಾನ ರಸ್ತೆಯಲ್ಲಿ ಗ್ರಾಪಂ ಅಧಿಕಾರಿಗಳು, ಸದಸ್ಯರು ಸ್ವಚ್ಛತಾ ಕಾರ್ಯ ಕೈಗೊಂಡರು.

ವಡ್ಡರಹಟ್ಟಿ ಗ್ರಾಪಂ ಕಾರ್ಯದರ್ಶಿಗಳಾದ ಈಶಪ್ಪ, ಗ್ರಾಪಂ ಸದಸ್ಯರಾದ ಹನುಮನಗೌಡ, ಹೊನ್ನುರಬಿ, ಭರತ್ ಕುಮಾರ, ಮುಖಂಡರಾದ ಶಿವಪ್ಪ ಹತ್ತಿಮರದ, ಸಿದ್ದನಗೌಡ, ಗ್ರಂಥಾಲಯ ಮೇಲ್ವಿಚಾರಕ ವೀರೇಶ, ಬಿಎಫ್ ಟಿ ಅಮರೇಶ, ಗ್ರಾಮ ಕಾಯಕ ಮಿತ್ರರಾದ ಸುಜಾತ, ಆಶಾ, ಅಂಗನವಾಡಿ ಕಾರ್ಯಕರ್ತರು ಸೇರಿ ಇತರರು ಇದ್ದರು.

About Mallikarjun

Check Also

ಶ್ರೀ ಶಂಕರಾಚಾರ್ಯ ಜಯಂತೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ.

Preparatory meeting on the occasion of Sri Shankaracharya Jayanthotsava. ಗಂಗಾವತಿ. ನಗರದ ತಹಸಿಲ್. ಕಚೇರಿಯ ಕಾರ್ಯಾಲಯದಲ್ಲಿ ಸೋಮವಾರದಂದು. …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.