National Democracy Day celebration in the premises of Lions Educational Institution
ಗಂಗಾವತಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಪ್ಪಳ, ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಲಯನ್ಸ್ ಕ್ಲಬ್ ಗಂಗಾವತಿ ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್-೧೫ ರಂದು ಲಯನ್ಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ವಿಶೆಷ ಚೇತನ ಮಕ್ಕಳೊಂದಿಗೆ ಆಚರಿಸಲಾಯಿತು ಎಂದು ಲಯನ್ಸ್ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರಭು ಎಸ್. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದರು.
ಲಯನ್ಸ್ ವಿಶೇಷ ಚೇತನ ಮಕ್ಕಳ ಮಾನವ ಸರಪಳಿ ನಿರ್ಮಿಸಿ, ಘೋಷಣೆ ಕೂಗುವುದರೊಂದಿಗೆ ವಿಶೇಷವಾಗಿ ಆಚರಿಸಲಾಯಿತು.
ಈ ದಿನಾಚರಣೆಯ ಅಧ್ಯಕ್ಷತೆಯನ್ನು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಯಾದ ವೆಂಕಟೇಶ ದೇಶಪಾಂಡೆ ವಹಿಸಿದ್ದರು. ಲಯನ್ಸ್ ಕ್ಲಬ್ ಕಾರ್ಯದರ್ಶಿಗಳಾದ ರಾಘವೇಂದ್ರ ಶ್ರೇಷ್ಠಿ, ಲಯನ್ಸ್ ಶಿಕ್ಷಣ ಸಂಸ್ಥೆಯ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.