Breaking News

ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ:ಕೊಪ್ಪಳದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಕಾಮಗಾರಿಗೆ ೫೬ ಕೋಟಿ ರೂ. ಅನುದಾನ ನೀಡಲು ಒಪ್ಪಿಗೆ

Cabinet meeting at Laburagi:
56 crores for construction of new court complex in Koppal. Agree to Grant

ಜಾಹೀರಾತು

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ರ‍್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸೇರಿದಂತೆ ಭರಪೂರ ಕೊಡುಗೆ ನೀಡಲಾಗಿದೆ.

ಇಂದು ಸಂಜೆ ಮಿನಿವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಜೆಟ್ ನಲ್ಲಿ ಘೋಷಿಸಿದ್ದ ಕಲ್ಯಾಣ ರ‍್ನಾಟಕ ಭಾಗದ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದರು.

ಕಲ್ಯಾಣ ರ‍್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪ್ರಸಕ್ತ ೨೦೨೪-೨೫ನೇ ಸಾಲಿನ ಆಯವ್ಯಯದಲ್ಲಿ ದಾಖಲೆ ಪ್ರಮಾಣದಲ್ಲಿ ೫,೦೦೦ ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ ಮತ್ತು ಕೃಷಿ ಇಲಾಖೆಗೆ ೧೦೦ ಕೋಟಿ ಅನುದಾನ ಮೀಸಲಿಟ್ಟಿದ್ದೇವೆ ಎಂದರು.

ಸಂಪುಟ ಸಭೆಗೆ ಮುನ್ನ ತೆಗೆದ ಚಿತ್ರ
ಕಲ್ಯಾಣ ರ‍್ನಾಟಕ ಉತ್ಸವ: ೧,೬೮೫ ಕೋಟಿ ರೂ ವೆಚ್ಚದಲ್ಲಿ ಸ್ಮರ‍್ಟ್ ಸಿಟಿಯಾಗಿ ಕಲಬುರಗಿ ಅಭಿವೃದ್ಧಿ!

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ೫೬ ವಿಷಯಗಳನ್ನು ರ‍್ಚಿಸಿದ್ದೇವೆ. ಕಲ್ಯಾಣ ರ‍್ನಾಟಕಕ್ಕೆ ಸಂಬಂಧಿಸಿದ ೪೬ ವಿಚಾರಗಳನ್ನು ರ‍್ಚಿಸಿದ್ದೇವೆ. ಕಲ್ಯಾಣ ರ‍್ನಾಟಕ ಭಾಗದ ಒಟ್ಟು ಮೊತ್ತ ೧೧,೭೭೦ ಕೋಟಿ ರೂ. ಆಗಿದ್ದು, ಬೀದರ್, ಮತ್ತು ರಾಯಚೂರಿನಲ್ಲಿ ಮಹಾನಗರ ಪಾಲಿಕೆ ಮಾಡಲು ತರ‍್ಮಾನಿಸಲಾಗಿದೆ ಎಂದು ಸಿಎಂ ಹೇಳಿದರು.

ಬೀದರ್ ಮತ್ತು ಕಲಬುರಗಿಯಲ್ಲಿ ೭,೨೦೦ ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಜಾರಿಗೆ ತರಲು ನರ‍್ಧರಿಸಲಾಗಿದೆ. ನಾರಾಯಣಪುರ ಡ್ಯಾಂನಿಂದ ನೀರು ಸರಬರಾಜು ಮಾಡಲಾಗುತ್ತದೆ. ಈ ಯೋಜನೆಯ ಬಗ್ಗೆ ಕೇಂದ್ರಕ್ಕೂ ಮಾಹಿತಿ ನೀಡಿದ್ದೇವೆ ಎಂದು ಸಿಎಂ ತಿಳಿಸಿದರು.

ಪ್ರತ್ಯೇಕ ಸಚಿವಾಲಯ ಮಾಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಈ ಬಗ್ಗೆ ಸಂಪುಟ ಸಭೆಯಲ್ಲಿ ರ‍್ಚಿಸಲಾಗಿದೆ. ಕಲ್ಯಾಣ ರ‍್ನಾಟಕಕ್ಕೆ ಈ ರ‍್ಷ ೫೦೦೦ ಕೋಟಿ ರೂ. ಕೊಟ್ಟಿದ್ದೇವೆ. ಆದರೆ ಕೇಂದ್ರ ರ‍್ಕಾರ ಇದುವರೆಗೆ ಒಂದು ರೂಪಾಯಿ ಕೊಟ್ಟಿಲ್ಲ. ೩೭೧ಜೆ ಸರ‍್ಪಡೆಯಾಗಿ ೧೦ ರ‍್ಷ ಆಗಿದೆ. ಇದಕ್ಕಾಗಿ ಕೇಂದ್ರ ರ‍್ಕಾರ ಕೂಡ ೫೦೦೦ ಕೋಟಿ ಹಣ ನೀಡಬೇಕು ಎಂದು ನರ‍್ಣಯ ಮಾಡಿದ್ದೇವೆ. ಖಾಲಿ ಇರುವ ೧೭೪೩೯ ಹುದ್ದೆಗಳನ್ನು ಹಂತ ಹಂತವಾಗಿ ರ‍್ತಿ ಮಾಡಲು ತರ‍್ಮಾನ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಕಲ್ಯಾಣ ರ‍್ನಾಟಕ ಸಂಪರ‍್ಣ ಆರೋಗ್ಯ ಅಭಿವೃದ್ಧಿ ಯೋಜನೆ ಜಾರಿಗೆ ಅನುಮೋದನೆ ನೀಡಲಾಗಿದೆ. ಇದರ ಅಡಿಯಲ್ಲಿ ಕಲ್ಯಾಣ ರ‍್ನಾಟಕ ಪ್ರದೇಶದಲ್ಲಿ ೪೫ ಹೊಸ ಆರೋಗ್ಯ ಕೇಂದ್ರಗಳು ಸ್ಥಾಪನೆಯಾಗಲಿವೆ. ೩೧ ಸಮುದಾಯ ಆರೋಗ್ಯ ಕೇಂದ್ರಗಳ ಮೇಲ್ರ‍್ಜೆಗೆ ಏರಲಿವೆ. ೯ ತಾಲೂಕು ಆಸ್ಪತ್ರೆಗಳನ್ನು ಉಪ ವಿಭಾಗೀಯ ಆಸ್ಪತ್ರೆಗಳಾಗಿ ಮೇಲ್ರ‍್ಜೆಗೇರಿಸಲಾಗುವುದು. ಎರಡು ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳನ್ನಾಗಿ ಮೇಲ್ರ‍್ಜೆಗೇರಿಸುವ ನರ‍್ಧಾರ ಮಾಡಲಾಗಿದೆ.

ಇನ್ನು ಕೊಪ್ಪಳದಲ್ಲಿ ನೂತನ ನ್ಯಾಯಾಲಯ ಸಂಕರ‍್ಣ ನರ‍್ಮಾಣ ಕಾಮಗಾರಿಗೆ ೫೬ ಕೋಟಿ ರೂ. ಅನುದಾನ ನೀಡಲು ಒಪ್ಪಿಗೆ ನೀಡಲಾಗಿದೆ.

About Mallikarjun

Check Also

ಆಶ್ರಯ ಮನೆಗಳ ಕಾಮಗಾರಿಪೂರ್ಣಗೊಳಿಸಿ ಅನುದಾನ ಪಡೆಯಿರಿ:ಮುಖ್ಯಾಧಿಕಾರಿ ನಾಗೇಶ,

Complete the work of shelter homes and get grant: Headmaster Nagesh ವರದಿ : ಪಂಚಯ್ಯ ಹಿರೇಮಠ.ಕಲ್ಯಾಣಸಿರಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.