Breaking News

ಗುಡೇಕೋಟೆ ಗ್ರಾಪಂ ಕ.ಕ.ವಿಮೋಚನಾ ದಿನಾಚರಣೆ

Gudekote Gramm K.K. Liberation Day

ಜಾಹೀರಾತು
ಜಾಹೀರಾತು

ಗುಡೇಕೋಟೆ:- ದೇಶದಲ್ಲೆಡೆ ಸ್ವಾತಂತ್ರ್ಯ ಸಿಕ್ಕಿದ್ದರೂ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ತಡವಾಗಿ ಸ್ವಾತಂತ್ರ್ಯ ಸಿಕ್ಕಿದೆ. ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಅಸಂಖ್ಯಾ ಹೋರಾಟಗಾರರ ತ್ಯಾಗ, ಬಲಿದಾನಗಳ ಫಲವಾಗಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲರ ಸಂಕಲ್ಪ ಶಕ್ತಿಯಿಂದಾಗಿ ಹೈದರಾಬಾದ್ ಕರ್ನಾಟಕ ನಿಜಾಮರ ಆಳ್ವಿಕೆಯಿಂದ ಮುಕ್ತವಾಗಿ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾಯಿತು. ಇದಕ್ಕಾಗಿ ಹೋರಾಡಿದ ಎಲ್ಲಾ ಮಹನೀಯರನ್ನು ನಾವೆಲ್ಲರೂ ಸ್ಮರಿಸಿ ಗೌರವಿಸೋಣ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್ ಕೃಷ್ಣ ಹೇಳಿದರು.

ಕೂಡ್ಲಿಗಿ ತಾಲೂಕು ಗುಡೇಕೋಟೆ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಆಯೋಜಿಸಲಾದ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಶ್ರೀ ವಿಶ್ವಕರ್ಮ ಜಯಂತಿ ಅಂಗವಾಗಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಶೈಕ್ಷಣಿಕವಾಗಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದಿದ್ದು ಈಗ 371 ಜೆ ಜಾರಿಯಾದ ವರ್ಷದಿಂದ ಬಹಳಷ್ಟು ಹೆಚ್ಚಳವಾಗಿದೆ. ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ವಿಶೇಷ ಒತ್ತು ನೀಡುವುದರಿಂದ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಹೆಚ್ಚಿನ ಅವಕಾಶಗಳು ಈ ಭಾಗದವರಿಗೆ ಮೀಸಲಾಗಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಗುಡೇಕೋಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸಮ್ಮ, ಮಠದ ಶಿವುಕುಮಾರಸ್ವಾಮಿಗಳು ಸದಸ್ಯರಾದ ಎನ್.ಪ್ರಭಾಕರ್,ಎಸ್ ಬೋಮ್ಮಣ್ಣ,ಕೆ.ಮಂಜುನಾಥ್,ಎನ್ ಶಿವುಕುಮಾರ್,ಸರ್ವ ಸದಸ್ಯರು, ಹಾಗೂ ಕಾಂಗ್ರೆಸ್ ಮುಖಂಡ ಪೇಂಟ್ ತಿಪ್ಪೇಸ್ವಾಮಿ,ಬಿಜೆಪಿ ಮುಖಂಡ ಮಲ್ಲಯ್ಯ, ಕಾರ್ಯದರ್ಶಿ ರಾಮಚಂದ್ರಪ್ಪ,ಬಿಲ್ ಕಲೆಕ್ಟರ್ ಯರ್ರಿಸ್ವಾಮಿ ಆಚಾರಿ,ಭೀಮನಾಯ್ಕ,ಶೈಲಾಜಾ, ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About Mallikarjun

Check Also

ನ್ಯಾಯಾಲಯಗಳಲ್ಲಿ ಕನ್ನಡ ಭಾಷಾ ಅನುಷ್ಠಾನ ರಾಜ್ಯ ಸಮಿತಿ ಉದ್ಘಾಟನಾ ಸಮಾರಂಭ.

Inaugural ceremony of the State Committee for Implementation of Kannada Language in Courts. ಬೆಂಗಳೂರು ಮಾರ್ಚ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.