Breaking News

371 ಜೆ ಅಡಿಯಲ್ಲಿ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಪ್ರತಿ ತಿಂಗಳು 2 ಪುಟ ವಿಶೇಷ ಜಾಹೀರಾತು ನೀಡಲು ಸಂಪಾದಕರ ಸಂಘ ಒತ್ತಾಯ

Under 371J, the editors’ association is required to issue 2 page special advertisement every month to the district and regional newspapers

ಜಾಹೀರಾತು

371 ಜೆ ಅಡಿಯಲ್ಲಿ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಪ್ರತಿ ತಿಂಗಳು 2 ಪುಟ ವಿಶೇಷ ಜಾಹೀರಾತು ನೀಡಲು ಸಂಪಾದಕರ ಸಂಘ ಒತ್ತಾಯ
ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ
ಡಾ.ಶರಣಪ್ರಕಾಶ ಪಾಟೀಲರಿಗೆ ಮನವಿ ಸಲ್ಲಿಕೆ
ರಾಯಚೂರು : 371 ಜೆ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಜಿಲ್ಲಾ ಮತ್ತು ಪ್ರಾದೇಶಿಕ ದಿನ ಪತ್ರಿಕೆಗಳಿಗೆ ಪ್ರತಿ ತಿಂಗಳು 2 ಪುಟ ವಿಶೇಷ ಜಾಹೀರಾತು ನೀಡಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘದಿಂದ ವೈದ್ಯಕೀಯ ಹಾಗೂ ಕೌಶಲ್ಯ ಅಭಿವೃದ್ದಿ ಸಚಿವ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ ಪಾಟೀಲ್ ಅವರಿಗೆ ಹಾಗೂ ಸಚಿವ ಎನ್.ಎಸ್.ಬೋಸರಾಜು ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ನಗರದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿದ ನಂತರ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಮನವಿ ಪತ್ರವನ್ನು ಸಲ್ಲಿಸಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವಂತಹ ಏಳು ಜಿಲ್ಲೆಗಳ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಪ್ರತಿ ತಿಂಗಳು ಎರಡು ಪುಟಗಳ ವಿಶೇಷ ಜಾಹೀರಾತು ನೀಡಬೇಕು.
371 ಜೆ ಅಡಿಯಲ್ಲಿ ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಈವರೆಗೂ ಯಾವುದೇ ಸೌಲಭ್ಯ ನೀಡಿಲ್ಲ. ಸರ್ಕಾರವು ಈ ನಿಟ್ಟಿನಲ್ಲಿ ಗಮನ ಹರಿಸಬೇಕಾಗಿದೆ.
ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರಕಟವಾಗುತ್ತಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಧ್ಯಮ ಪಟ್ಟಿಯಲ್ಲಿರುವ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಪ್ರತಿ ತಿಂಗಳು ಎರಡು ಪುಟ ಜಾಹೀರಾತು ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಬೇಕು. ಈ ಮೂಲಕ ಪತ್ರಿಕೆಗಳಿಗೆ ಉತ್ತೇಜನ ನೀಡಬೇಕು .
ಸಂವಿಧಾನದ ಕಲಂ ೩೭೧(ಜೆ) ಅನ್ವಯ ವಿಶೇಷ ಸ್ಥಾನಮಾನ ಕಲ್ಪಿಸಲಾಗಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಏಳು ಜಿಲ್ಲೆಗಳಲ್ಲಿ ಪ್ರಕಟವಾಗುವ ಪತ್ರಿಕೆಗಳಿಗೆ ಕರ್ನಾಟಕ ಸರ್ಕಾರದ ಜಾಹೀರಾತು ನೀತಿ-೨೦೧೩ ಮತ್ತು ಅನುಷ್ಠಾನ ನಿಯಮಗಳು-೨೦೧೪ ಅಧ್ಯಾಯ ೪ ಅಂಗೀಕೃತ ಮಾಧ್ಯಮ ಪಟ್ಟಿ-೧೧೭/೧)ರ ಅನ್ವಯ ಪ್ರಸಾರ ಸಂಖ್ಯೆ ಮತ್ತು ಮಾಧ್ಯಮ ಪಟ್ಟಿಗೆ ಸೇರ್ಪಡೆಗೆ ವಿಶೇಷ ರಿಯಾಯಿತಿ ಕಲ್ಪಿಸಲಾಗಿದೆ. ೩೭೧ (ಜೆ) ಅನುಷ್ಠಾನ ಮಾರ್ಗಸೂಚಿಯಲ್ಲಿ ಸ್ಥಳೀಯ ಪತ್ರಿಕೆಗಳ ಸಬಲೀಕರಣಕ್ಕೆ ಉತ್ತೇಜನ ನೀಡಲು ಸೂಚಿಸಲಾಗಿದ್ದು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಸ್ಥಳೀಯ ಪತ್ರಿಕೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಜಾಹೀರಾತು ನೀಡಲು ಅವಕಾಶವಿರುತ್ತದೆ.
ಇಂದು ಕಲಬುರಗಿ ನಗರದಲ್ಲಿ ನಡೆಯುವ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿದ್ದು, ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಸಂಪಾದಕರ ಸಂಘವು ಮುಖ್ಯಮಂತ್ರಿಗಳಿಗೂ ಈಗಾಗಲೇ ಮನವಿ ಪತ್ರ ಸಲ್ಲಿಸಲಾಗಿದೆ. ತಾವು ಈ ಭಾಗದ ಸಚಿವರಾಗಿದ್ದು ಮುಖ್ಯಮಂತ್ರಿಗಳಿಗೆ ಶಿಫಾರಸ್ಸು ಮಾಡುವ ಮೂಲಕ ಈ ಭಾಗದ ಪತ್ರಿಕೆಗಳಿಗೆ ಪ್ರತಿ ತಿಂಗಳು ಎರಡು ಪುಟ ಜಾಹೀರಾತು ಬಿಡುಗಡೆಯಾಗಲು ಬೆಂಬಲ ನೀಡಬೇಕೆಂದು ಮನವಿ ಮಾಡಲಾಯಿತು.
ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯ ಉಪಾಧ್ಯಕ್ಷ ಭೀಮರಾಯ ಹದ್ದಿನಾಳ, ಪ್ರಧಾನ ಕಾರ್ಯದರ್ಶಿ ಪಿ ಚನ್ನಬಸವ ಬಾಗಲವಾಡ, ರಾಜ್ಯ ಖಜಾಂಚಿ ಖಾನ್ ಸಾಬ್ ಮೋಮಿನ್ ಅವರ ನೇತೃತ್ವದಲ್ಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಪಾದಕರು ಇದ್ದರು.

About Mallikarjun

Check Also

ತೆಲಗಿ ಮಾದರಿಯಲ್ಲಿ ಮತ್ತೊಂದು ಭಾರೀ ನಕಲಿ ಛಾಪಾ ಕಾಗದ ಹಗರಣ

Another massive fake printing paper scam on the Telugu model ಕಾನೂನು ಬಾಹಿರ ಫ್ರಾಂಕಿಂಗ್ ಮೂಲಕ ಸರ್ಕಾರದ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.