Farmers Mudukappa and Maddanappa who won in Belesfardhe were felicitated by the Minister
ಕೊಪ್ಪಳ, ಸೆಪ್ಟಂಬರ್ 18 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತದಿಂದ ಸೆ.17ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 77ನೇ ಕಲ್ಯಾಣ ಕರ್ನಾಟಕ ಉತ್ಸವ ದಿನದ ಸಮಾರಂಭದಲ್ಲಿ ಕೊಪ್ಪಳ ಜಿಲ್ಲೆಯ ಪ್ರಗತಿಪರ ರೈತರಾದ ಮುದಕಪ್ಪ ಮತ್ತು ಮದ್ದಾನಪ್ಪ ಅವರಿಗೆ ಸನ್ಮಾನಿಸಲಾಯಿತು.
2023-24ನೇ ಸಾಲಿನ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಭತ್ತ ಬೆಳೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಗಂಗಾವತಿ ತಾಲೂಕಿನ ಕೋಟಯ್ಯಕ್ಯಾಂಪನ ಮುದುಕಪ್ಪ ತಂದೆ ಮರಿಯಪ್ಪ ಅವರಿಗೆ ಹಾಗೂ 2023-24ನೇ ಸಾಲಿನ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಮುಸುಕಿನ ಜೋಳ ಬೆಳೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಗಂಗಾವತಿ ತಾಲೂಕಿನ ಗಡ್ಡಿ ಗ್ರಾಮದ ಮದ್ದಾನಪ್ಪ ತಂದೆ ನಾಗಪ್ಪ ಅವರಿಗೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ, ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಮತ್ತು ಹೇಮಲತಾ ನಾಯಕ ಅವರು ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್. ಅರಸಿದ್ದಿ, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತಕುಮಾರ, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್ ಹಾಗೂ ಇನ್ನೀತರರು ಇದ್ದರು.