Kalyan Karnataka Festival Day: Land Title Deed Distribution
ಕೊಪ್ಪಳ ಸೆಪ್ಟೆಂಬರ್ 18 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದಿಂದ ಸೆ.17ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 77ನೇ ಕಲ್ಯಾಣ ಕರ್ನಾಟಕ ಉತ್ಸವ ದಿನದ ಸಮಾರಂಭದಲ್ಲಿ ಜಿಲ್ಲೆಯ ಫಲಾನುಭವಿಗಳಿಗೆ ನಿವೇಶನ ಹಕ್ಕು ಪತ್ರ ವಿತರಣೆ ಮಾಡಲಾಯಿತು.
ಕೊಪ್ಪಳ ತಾಲ್ಲೂಕಿನ ಕಲ್ ತಾವರಗೇರಾ ಗ್ರಾಮದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ 135 ನಿವೇಶನಗಳು ಮಂಜೂರಾಗಿದ್ದು, ಅದರಲ್ಲಿ ಸಾಂಕೇತಿಕವಾಗಿ ಬಸಮ್ಮ ಗಂಡ ಧ್ಯಾಮಣ್ಣ ಬಂಗಾಳಿ, ಹುಲಿಗೆಮ್ಮ ಗಂಡ ಲಕ್ಷ್ಮಣ್ಣ ಮಾಳೆಕೊಪ್ಪ, ಗಾಳೆವ್ವ ಗಂಡ ದುರುಗಪ್ಪ ಗುಡ್ಲಾನೂರ್, ಶಿವಪ್ಪ ತಂದೆ ಹುಚ್ಚಪ್ಪ ಚೌದ್ರಿ, ಮಹಾದೇವಪ್ಪ ತಂದೆ ಲಕ್ಷ್ಮಣ್ ಮಡಿವಾಳರ್, ಯಂಕಪ್ಪ ತಂದೆ ಬಸಪ್ಪ ಮರಾಠಿ ಎಂಬ 6 ಫಲಾನುಭವಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಸಾಂಕೇತಿಕವಾಗಿ ನಿವೇಶನ ಹಕ್ಕು ಪತ್ರಗಳನ್ನು ನೀಡಿದರು. ಈ ವೇಳೆ ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಮತ್ತು ಹೇಮಲತಾ ನಾಯಕ, ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಎಸ್.ಎಂ. ಪಟೇಲ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್. ಅರಸಿದ್ದಿ, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತಕುಮಾರ ಹಾಗೂ ಇನ್ನೀತರರು ಇದ್ದರು.