Library supervisor Indrappa Kolur was honored by the district administration
ಕೊಪ್ಪಳ, ಸೆಪ್ಟಂಬರ್ 18 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಗ್ರಂಥಾಲಯ ನಿರ್ವಹಣೆ ಮಾಡುತ್ತಿರುವ ಇಂದರಗಿ ಗ್ರಾಮ ಪಂಚಾಯತಿಯ ಗ್ರಂಥಾಲಯ ಮೇಲ್ವಿಚಾರಕರಾದ ಇಂದ್ರಪ್ಪ ಕನಕಪ್ಪ ಕೋಳೂರ ಅವರಿಗೆ ಕೊಪ್ಪಳ ಜಿಲ್ಲಾಡಳಿತದಿಂದ ಸೆ.17ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 77ನೇ ಕಲ್ಯಾಣ ಕರ್ನಾಟಕ ಉತ್ಸವ ದಿನದ ಸಮಾರಂಭದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಕರ್ನಾಟಕ ರಾಜ್ಯ ಅರಿವು ಕೇಂದ್ರ, ಇಂದರಗಿ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ನೌಕರರ ಸಂಘದ ಜಿಲ್ಲಾ ಘಟಕ ಇವರು, ಉತ್ತಮ ಗ್ರಂಥಪಾಲಕರು ಎಂದು ಇಂದ್ರಪ್ಪ ಕನಕಪ್ಪ ಕೋಳೂರ ಅವರನ್ನು ಗುರುತಿಸಿದ್ದರು.
ಸಮಾರಂಭದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್. ಅರಸಿದ್ದಿ, ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತಕುಮಾರ, ಜಿಲ್ಲಾ ಗ್ರಂಥಾಲಯ ಇಲಾಖೆಯ ಅಧಿಕಾರಿ ಯಮನಪ್ಪ ಹಾಗೂ ಇನ್ನೀತರರು ಇದ್ದರು.