Breaking News

ಜಿಲ್ಲಾ ಮಟ್ಟದ ಗಣಿತ ಕಾರ್ಯಗಾರ ಚಾಲನೆ ಶಾಸಕ ಎಸ್ ಟಿ ಶ್ರೀನಿವಾಸ್

District Level Mathematics Worker Driving MLA ST Srinivas

ಜಾಹೀರಾತು

ಕೂಡ್ಲಿಗಿ: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಕ್ರಿಯಾಶೀಲತೆ, ಬುದ್ಧಿಶಕ್ತಿ ಇರುತ್ತದೆ. ಶಿಕ್ಷಕರಾದವರು ಅಂತಾಹ ಮಕ್ಕಳನ್ನು ಗುರುತಿಸಿ ಪೋತ್ಸಾಹಿಸಬೇಕು. ಗಣಿತ ವಿಷಯ ಅತ್ಯಂತ ಸರಳವಾಗಿದ್ದು, ಕಬ್ಬಿಣದ ಕಡಲೆಯನ್ನಾಗಿ ಮಾಡಿಕೊಂಡಿದ್ದೇವೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು. ಪಟ್ಟಣದ ಹಿರೇಮಠ ಕಲ್ಯಾಣ ಮಂಟಪದಲ್ಲಿ ಬುಧವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಧಿಕಾರಿಗಳು ಕಚೇರಿ ಹಾಗೂ ಗಣಿತಾ ವಿಷಯ ವೇದಿಕೆ ಮತ್ತು ಇತರೆ ಸಂಘಟನೆಗಳ ಸಹಕಾರದಿಂದ ಪ್ರಸಕ್ತ ಸಾಲಿನ ಎಸ್ ಎಸ್ಎಲ್ ಸಿ ಫಲಿತಾಂಶ ಸುಧಾರಣೆಗಾಗಿ ಜಿಲ್ಲಾ ಮಟ್ಟದ ಗಣಿತಾ ವಿಷಯದ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ವಿಧ್ಯಾರ್ಥಿಗಳಿಗೆ ಗಣಿತ ವಿಷಯ ತುಂಬಾ ಕಷ್ಟಕರವಾಗಿ ಪರಿಣಮಿಸಿದೆ, ಶಿಕ್ಷಕರು ಅವರಿಗೆ ಸುಲಭವಾಗಿ ಕಲಿಯುವ ಕಲಿಕಾ ಪಟ್ಟುಗಳನ್ನು ತಿಳಿಸಬೇಕು. ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಸ್ವಲ್ಪ ಹಿನ್ನಡೆಯಾಗಿದ್ದು, ಅದನ್ನು ಸರಿಪಡಿಸಲು ಶಿಕ್ಷಕ ಸಮೂಹ ಇಂತಹ ಕಾರ್ಯಗಾರ ಆಯೋಜಿಸಿರುವುದು ಸ್ವಾಗತಾರ್ಹ, ಇದೇ ರೀತಿ ಎಲ್ಲಾ ವಿಷಯದಲ್ಲಿಯೂ ಕಾರ್ಯಗಾರ ಆಯೋಜನೆ ಮಾಡಿದರೆ ವಿಧ್ಯಾರ್ಥಿಗಳಿಗೆ ಕಲಿಯಲು ಸಹಕಾರಿಯಾಗಲಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಇಂತಹ ಕಾರ್ಯಗಾರ ಹಮ್ಮಿಕೊಂಡಲ್ಲಿ ಅದರ ಸಂಪೂರ್ಣ ಜವಾಬ್ದಾರಿ ಸ್ವತಃ ನಾವೇ ತಗೆದುಕೊಳ್ಳುವುದಾಗಿ ವಾಗ್ದಾನ ನೀಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮದಲ್ಲಿ ಈಗಾಗಲೇ ಶಿಕ್ಷಣಕ್ಕಾಗಿ ಶೇ 30 ರಷ್ಟು ಅನುದಾನ ಮೀಸಲಿರಿಸಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲಾಗಳ ಕೊಠಡಿಗಳು ಸೇರಿದಂತೆ ಮೂಲ ಸೌಕರ್ಯಗಳ ಒದಗಿಸಲು ಮುಂದಾಗುವುದಾಗಿ ತಿಳಿಸಿದರು. ಅದರಂತೆ ಶಿಕ್ಷಕರ ಬಹು ದಿನಗಳ ಬೇಡಿಕೆಯಾದ ಶಿಕ್ಷಕರ ಭವನಕ್ಕೆ ತಾಂತ್ರಿಕ ತೊಂದರೆ ಇದ್ದು, ಅದನ್ನು ಸರಿಪಡಿಸಿ ಶೀಘ್ರದಲ್ಲೇ ಕಾಮಗಾರಿ ಆರಂಭಿಸಲು ಎಲ್ಲಾ ಸಿದ್ದತೆ ನಡೆಸಿದ್ದವೆ ಎಂದು ತಿಳಿಸಿದರು.
ಕೂಡ್ಲಿಗಿ ಹಿರೇಮಠದ ಪ್ರಶಾಂತ ಸಾಗರ ಶಿವಾಚಾರ್ಯ ಸ್ವಾಮಿಜೀ ಸಾನಿಧ್ಯವಹಿಸಿದ್ದರು.ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ಸ್ಥಾಯಿ ಸಮಿತಿ ಅಧ್ಯಕ್ಷ ಸಯ್ಯದ್ ಶುಕೂರ್, ಬಿಇಒ ಪದ್ಮನಾಭ ಕರಣಂ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಜಿ.ಮನೋಹರ, ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ್,
ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಎಸ್.ಜಗದೀಶ್, ಬಿಸಿಯೂಟ ಯೋಜನಾಧಿಕಾರಿ ಕೆ.ಜಿ.ಆಂಜನೇಯ, ಕರ್ನಾಟಕ ರಾಜ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಪಿ.ಅನಂತ ಕುಮಾರ್, ಪ್ರೌಢಶಾಲಾ ಬಡ್ತಿ ಮುಖ್ಯ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪಿ.ಡಿ.ರಂಗಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಸ್.ವಿ.ಸಿದ್ದರಾಧ್ಯ, ನಿಕಟ ಪೂರ್ವ ಅಧ್ಯಕ್ಷ ಕೆ.ಎಸ್.ವೀರೇಶ್, ಸಿದ್ದಪ್ಪ ಸೇರಿದಂತೆ ಅನೇಕರು ಇದ್ದರು.

About Mallikarjun

Check Also

ದಸರಾ ಮಹೋತ್ಸವದ ಅಂಗವಾಗಿ ಕಲ್ಮಠದಲ್ಲಿ ಸರ್ವಧರ್ಮ ಸಮ್ಮೇಳನ

Interfaith conference in Kalmath as part of Dussehra celebrations ಮಾನ್ವಿ: ಪಟ್ಟಣದ ಮುಕ್ತಾಗುಚ್ಚ ಬೃಹನ್ಮಠದಲ್ಲಿ 49 ನೇ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.