Dr. H. A. Satvik visited Rims Hospital, inquired about children’s health

ರಾಯಚೂರು,ಸೆ.19,():- ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹತ್ತಿರ ಸೆ.05ರ ಗುರುವಾರ ಕೆಎಸ್‌ಆರ್‌ಟಿಸಿ ಬಸ್-ಶಾಲಾ ವಾಹನ ನಡುವೆ ಅಪಘಾತ ಹಿನ್ನಲೆಯಲ್ಲಿ ಇಂದು (ಸೆ.19ರ ಗುರುವಾರ) ಹಿರಿಯ ಶ್ರೇಣಿ ದಿವಾನಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಅವರು ನಗರದ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು.

ರಿಮ್ಸ್ ಆಸ್ಪತ್ರೆಯಲ್ಲಿ ಸಿಗುವ ಸರ್ಕಾರಿ ಸೌಲಭ್ಯಗಳ ಕುರಿತು ವೈದ್ಯಾಧಿಕಾರಿಗಳೊಂದಿಗೆ ಮಾಹಿತಿ ಪಡೆದರು. ನಂತರ ಮಕ್ಕಳ ಮತ್ತು ನವಜಾತ ಶಿಶು ಸೂಕ್ಷö್ಮ ನಿಗಾ ಘಟಕಕ್ಕೆ ಭೇಟಿ ನೀಡಿ ವೈದ್ಯರ ಕರ್ತವ್ಯ ಸರದಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ಉತ್ತಮ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡಿ ಬಡವರಿಗೆ ನೆರವಾಗಬೇಕು. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಸ್ಥಳದಲ್ಲಿದ್ದ ವೈದ್ಯರಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಂಕರ್, ವೈದ್ಯಕೀಯ ಅಧೀಕ್ಷರು ಡಾ. ಬಾಸ್ಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತ ಸೇರಿದಂತೆ ಇತರರು ಇದ್ದರು.
Kalyanasiri Kannada News Live 24×7 | News Karnataka
