Lakshmidevi warns of legal action if arrears are not paid
ಗಂಗಾವತಿ : ತಾಲೂಕಿನ 18 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸಣ್ಣ ಮತ್ತು ದೊಡ್ಡ ಕೈಗಾರಿಕಾ ವಲಯಗಳು ಸೇರಿ ಒಟ್ಟು 490 ಮಾಲೀಕರು ಕಳೆದ ಮೂರು ವರ್ಷದಿಂದ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತ್ವರಿತವಾಗಿ ತೆರಿಗೆ ಪಾವತಿಸಲು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಸೂಚಿಸಿದ್ದಾರೆ.
ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಂಪನಿಯ ಮೊಬೈಲ್ ಟವರ್ ಗಳು ಹಾಗೂ ಸಾರ್ವಜನಿಕ ಮಳಿಗೆಗಳು, ರೈಸ್ ಮಿಲ್ ಗಳು, ಪೆಟ್ರೋಲ್ ಬಂಕ್ ಗಳು, ಕ್ರಷರ್ ಗಳು, ಖಾಸಗಿ ಶಾಲೆ-ಕಾಲೇಜುಗಳು, ವಾಣಿಜ್ಯ ಆಸ್ತಿಗಳು ಸೇರಿದಂತೆ ಇತರೆ ಎಲ್ಲಾ ಸಣ್ಣ/ದೊಡ್ಡ ವ್ಯಾಪಾರಿಗಳು ಗ್ರಾ.ಪಂ ಗಳಿಗೆ ಪ್ರತಿವರ್ಷ ತೆರಿಗೆ ಪಾವತಿ ಮಾಡುವುದು ಕಡ್ಡಾಯವಾಗಿರುತ್ತದೆ. ಸತತವಾಗಿ ಮೂರು ವರ್ಷಗಳಿಂದ ತೆರಿಗೆ ಪಾವತಿಸದೇ ಇರುವ ಕೈಗಾರಿಕಾ, ವಾಣಿಜ್ಯ ಮಳೆಗೆಗಳಿಗೆ, ಇನ್ನಿತರ ವಸತಿ-ನಿವೇಶನ ಕಟ್ಟಡಗಳಿಗೆ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 200 (4) ರ ಅಡಿಯಲಿ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಿಕೆ ಪ್ರಕಟಣೆ ಮೂಲಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಎಚ್ಚರಿಸಿದ್ದಾರೆ.