A garden was dedicated to Tungabhadra river by CMCdramayya
ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವ ಎನ್ ಎಸ್ ಬೋಸರಾಜು*
ಗೇಟ್ ದುರಸ್ತಿಗೊಳಿಸಿದ ಕಾರ್ಮಿಕರಿಗೆ ಸನ್ಮಾನ ಮಾಡಿದ ಸಿಎಂ ಸಿದ್ದರಾಮಯ್ಯ, ಎನ್ ಎಸ್ ಬೋಸರಾಜು
ತುಂಗಭದ್ರಾ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಹಾಗೂ ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆ ಸಚಿವರಾದ ಎನ್ ಎಸ್ ಬೋಸರಾಜು ಅವರು ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಿದರು.
ರಾಯಚೂರು ಜಿಲ್ಲೆಯ ರೈತರ ಜೀವನಾಡಿಯಾದ ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಿ ಕೆಲ ದಿನಗಳ ಹಿಂದೆ ತುಂಗಭದ್ರಾ ನದಿಯ 19ನೇ ಗೇಟ್ ಕಟ್ಟಾದ ಹಿನ್ನೆಲೆ ಗೇಟ್ ದುರಸ್ತಿಗೊಳಿಸಿದ ಕಾರ್ಮಿಕರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ತುಂಗಭದ್ರಾ ಜಲಾಶಯ ಮತ್ತೆ ತುಂಬಿದೆ. ಮುಂಗಾರು ಮತ್ತು ಹಿಂಗಾರು ಎರಡು ಬೆಳೆಗೆ ನೀರು ಸಿಗುತ್ತದೆ ಎಂದು ಘೋಷಿಸಿದರು. ಈ ಮೂಲಕ ಈ ಭಾಗದ ರೈತರಿಗೆ ಎರಡನೇ ಬೆಳೆಗೆ ನೀರು ಕೊಡುವುದಾಗಿ ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಹಿಂದುಳಿದ ವರ್ಗಗಳ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಬಳ್ಳಾರಿ ವಿಜಯನಗರ ಸಂಸದರಾದ ಇ ತುಕರಾಮ್, ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಹಂಪಯ್ಯ ನಾಯಕ್, ಸಿಂಧನೂರು ಶಾಸಕರಾದ ಬಾದರ್ಲಿ ಹಂಪನಗೌಡ, ಮಸ್ಕಿ ಕ್ಷೇತ್ರದ ಶಾಸಕರಾದ ಬಸನಗೌಡ ತುರುವಿಹಾಳ, ವಿಧಾನ ಪರಿಷತ್ ಸದಸ್ಯರಾದ ಬಸನಗೌಡ ಬಾದರ್ಲಿ, ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಮುಖಂಡರಾದ ಕೆ ಶಾಂತಪ್ಪ, ಶಿವಮೂರ್ತಿ ಸೇರಿ ಇನ್ನಿತರ ಉಪಸ್ಥಿತರಿದ್ದರು.
Post Views: 75
.