Chief Minister Siddaramaiah launched drinking water supply projects for Koppal Nagar and Bhagyanagar towns
ಕೊಪ್ಪಳ ಜಿಲ್ಲೆ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ಕೇಂದ್ರ ಪುರಸ್ಕೃತ ಅಮೃತ 2.0 ಯೋಜನೆಯಡಿ ಕೊಪ್ಪಳ ನಗರ ಮತ್ತು ಭಾಗ್ಯನಗರ ಪಟ್ಟಣಗಳಿಗೆ ಸಂಯುಕ್ತ ಕುಡಿಯುವ ನೀರು ಸರಬರಾಜು ಕಲ್ಪಿಸುವ ಯೋಜನೆಗಳಿಗೆ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಸೆ.22ರಂದು ಶಂಕುಸ್ಥಾಪನೆ ನೆರವೇರಿಸಿದರು.
ಕೊಪ್ಪಳ ತಾಲೂಕಿನ ಸರಕಾರಿ ಪ್ರೌಢಶಾಲೆ ಮೈದಾನ ಮುನಿರಾಬಾದ್‌ನಲ್ಲಿ ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಕೊಪ್ಪಳ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ನಗರಸಭೆ ಕೊಪ್ಪಳ, ಪಟ್ಟಣ ಪಂಚಾಯತ ಭಾಗ್ಯನಗರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಬಟನ್ ಒತ್ತು ಮೂಲಕ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಕೈಪಿಡಿ ಬಿಡುಗಡೆ, ಪೌರಕಾರ್ಮಿಕರಿಗೆ ನೇಮಕಾತಿ
ಆದೇಶ ಪ್ರತಿ ವಿತರಣೆ: ಕೊಪ್ಪಳ ಜಿಲ್ಲಾ ಪಂಚಾಯತ್‌ನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸಂಕಲ್ಪ ಕೈಪಿಡಿ ಮತ್ತು ಕೃಷಿ ಇಲಾಖೆಯ ಐದು ವರ್ಷಗಳ ಕ್ರೀಯಾ ಯೋಜನೆಗಳ ಕೈಪಿಡಿಯನ್ನು ಸಮಾರಂಭದಲ್ಲಿ ಬಿಡುಗಡೆಗೊಳಿಸಲಾಯಿತು. ಹಾಗೂ ಕೊಪ್ಪಳ ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪ್ರತಿಯನ್ನು ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರು ವಿತರಣೆ ಮಾಡಿದರು.
ಸಮಾರಂಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ, ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ, ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ಮುನಿರಾಬಾದ ತುಂಗಭದ್ರ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಿದ (ಕಾಡಾ) ಅಧ್ಯಕ್ಷರಾದ ಹಸನ್ ಸಾಬ್ ನಬೀಬ್ ಸಾಬ್ ದೋಟಿಹಾಳ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಭಾಗ್ಯನಗರ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ತುಕಾರಾಮಪ್ಪ ಚಂದ್ರಪ್ಪ ಗಡಾದ ಅವರು ಉಪಸ್ಥಿತರಿದ್ದರು. ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸಿದ್ದರು.
ವಿಶೇಷ ಆಹ್ವಾನಿತರಾಗಿ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಮುಖ್ಯ ಕಾರ್ಯದರ್ಶಿಗಳಾದ ಉಮಾಶಂಕರ, ಕೃಷ್ಣ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ ರಾಜ್, ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ರಾಮ್ ಎಲ್ ಅರಿಸಿದ್ದಿ, ಕಲಬುರಗಿ ಕ.ನ.ನೀ.ಸ ಮತ್ತು ಒಳ ಚರಂಡಿ ಮಂಡಳಿ ಮುಖ್ಯ ಅಭಿಯಂತರರಾದ ಪ್ರವೀಣ್ ಲಿಂಗಯ್ಯ, ರಾಯಚೂರು ಕ.ನ.ನೀ.ಸ ಮತ್ತು ಒಳ ಚರಂಡಿ ಮಂಡಳಿ ಕಾರ್ಯಪಾಲಕ ಅಭಿಯಂತರರಾದ ಚಂದ್ರಕಾAತ ಚೌವ್ಹಾಣ್, ಕೊಪ್ಪಳ ನಗರಸಭೆಯ ಪೌರಾಯುಕ್ತರಾದ ಗಣಪತಿ ಪಟೇಲ್, ಭಾಗ್ಯನಗರ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳಾದ ಸುರೇಶ್ ಬಬಲಾದ ಉಪಸ್ಥಿತರಿದ್ದರು.