Breaking News

ನಮ್ಮದು ನುಡಿದಂತೆ ನಡೆದಸರ್ಕಾರ:ಮುಖ್ಯಮಂತ್ರಿ ಸಿದ್ಧರಾಮಯ್ಯ

Ours is a government that works as it says: Chief Minister Siddaramaiah

ಜಾಹೀರಾತು
IMG 20240922 WA0473

ಕೊಪ್ಪಳ ಜಿಲ್ಲೆ ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ): ತುಂಗಭದ್ರಾ ಡ್ಯಾಮನಲ್ಲಿ ಡ್ಯಾಮನಲ್ಲಿ ಸದ್ಯ 101.373 ಟಿಎಂಸಿ ನೀರಿದೆ. ಒಟ್ಟು 132 ಟಿಎಂಸಿ ನೀರು ಶೇಖರಣೆಯ ಸಾರ‍್ಥö್ಯ ಈ ಡ್ಯಾಮಿಗಿದೆ. ಹೂಳು ತುಂಬಿದ್ದರಿAದಾಗಿ 26 ಟಿ.ಎಂ.ಸಿನಷ್ಟು ನೀರು ಶೇಖರಣೆಯಾಗುತ್ತಿಲ್ಲ. ಕಳೆದ ಆಗಸ್ಟ್ನಲ್ಲಿ ನಾವು ಜನತೆಗೆ ಮಾತುಕೊಟ್ಟಂತೆ ಡ್ಯಾಮ್ ಮತ್ತೆ ತುಂಬಿದೆ. ಜಲಾಶಯಕ್ಕೆ ಬಾಗಿನ ಸಮರ್ಪಿಸಿದ್ದೇವೆ. ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಹೇಳಿದರು.

20240922 205959 COLLAGE 1024x1024


ಕೊಪ್ಪಳ ತಾಲೂಕಿನ ಮುನಿರಾಬಾದ್ ಹೈಸ್ಕೂಲ್ ಆವರಣದಲ್ಲಿ ಜಲಸಂಪನ್ಮೂಲ ಇಲಾಖೆ ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ಸೆ.22ರಂದು ಹಮ್ಮಿಕೊಂಡಿದ್ದ, ತುಂಗಭದ್ರಾ ಆಣೆಕಟ್ಟಿನ ಗೇಟ್‌ನ್ನು ವಾರದೊಳಗೆ ನಿರ್ಮಿಸಿ, ಅಳವಡಿಸಿದ ಅಧಿಕಾರಿಗಳು, ತಂತ್ರಜ್ಞರು, ಸಿಬ್ಬಂದಿಗಳು ಹಾಗೂ ಗೇಟ್ ನಿರ್ಮಾಣ ಸಂಸ್ಥೆಯ ಪ್ರತಿನಿಧಿಗಳಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕದ ಎಡ ಮತ್ತು ಬಲ ದಂಡೆ, ಆಂದ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ತುಂಗಭದ್ರಾ ಆಣೆಕಟ್ಟು ಇದೆ ವರ್ಷ ಎರಡನೇ ಬಾರಿಗೆ ತುಂಬಿದೆ. ರೈತರು ಆತಂಕ ಪಡಬೇಕಿಲ್ಲ; ಎರಡನೇ ಬೆಳೆಗೂ ರೈತರಿಗೆ ನೀರು ಸಿಗಲಿದೆ ಎಂದರು.
ಗ್ಯಾರAಟಿ ಯೋಜನೆಗಳಿಂದ ಜನತೆಗೆ ಸಾಕಷ್ಟು ಅನುಕೂಲವಾಗಿದೆ. ರಾಜ್ಯದ 7 ಕೋಟಿ ಜನರ ಪೈಕಿ 3 ಕೋಟಿಯಷ್ಟು ಮಹಿಳೆಯರು ಉಚಿತ ಪ್ರಯಾಣ ಮಾಡಲು ಶಕ್ತಿ ಯೋಜನೆ ಸಹಕಾರಿಯಾಗಿದೆ. ಗೃಹಲಕ್ಷಿö್ಮ ಯೋಜನೆಯಡಿ 1.20 ಕೋಟಿ ಕುಟುಂಬಗಳು ಯಾವುದೇ ಮದ್ಯೆವರ್ತಿಗಳ ಹಾವಳಿಯಿಲ್ಲದೆ 2000 ರೂ. ಪಡೆಯುತ್ತಿವೆ. ಈ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ತಿಳಿಸಿದರು.
ಅಭಿನಂದನೆಗಳು: ಕಳೆದ ಆಗಸ್ಟ್ 10ರಂದು ಡ್ಯಾಮನ ಗೇಟ್ ಮುರಿದಾಗ ರೈತರು ಆತಂಕದಲ್ಲಿದ್ದರು. ಜಲ ಸಂಪನ್ಮೂಲ ಸಚಿವರು, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಇನ್ನಿತರರು ಹಗಲುರಾತ್ರಿ ಸ್ಥಳದಲ್ಲಿದ್ದು ದುರಸ್ಥಿಪಡಿಸಿದರು. ನಾನು ಸಹ ಡ್ಯಾಮ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಎಲ್ಲರೂ ಸೇರಿ ಕಾರ್ಯಪ್ರವೃತ್ತರಾತಗಿದ್ದರಿಂದ ಒಂದೇ ವಾರದಲ್ಲಿ ಗೇಟ್ ಅಳವಡಿಸಿದೆವು. ಇದರಿಂದಾಗಿ 20 ಟಿಎಂಸಿ ನೀರನ್ನು ಉಳಿಸಿದ ತಜ್ಞ ಕನ್ನಯ್ಯನಾಯ್ಡು, ಎಂಜಿನಿಯರ್‌ಗಳು ಮತ್ತು ಇನ್ನೀತರ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸರ್ಕಾರ ಮತ್ತು ರೈತರ ಪರವಾಗಿ ಅಭಿನಂದನೆಗಳನ್ನು ತಿಳಿಸುವೆ ಎಂದರು.
ಸಮಾರಂಭದಲ್ಲಿ ಭಾರಿ ಮತ್ತು ಮಧ್ಯಮ ನೀರಾವರಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಮತ್ತು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿದರು.
ಸಮಾರಂಭದಲ್ಲಿ ವಸತಿ, ವಕ್ಸ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮಾನ್ಯ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ, ಕರ್ನಾಟಕ ರಾಜ್ಯ ಕೈಗಾರಿಕ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಿಂಧನೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರ ಶಾಸಕರಾದ ಜೆ.ಎನ್.ಗಣೇಶ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರು ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರ ಶಾಸಕರಾದ ಆರ್.ಬಸನಗೌಡ ತುರುವಿಹಾಳ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ಶಾಸಕರಾದ ಬಸನಗೌಡ ದದ್ದಲ್, ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಬಳ್ಳಾರಿ ಸಂಸದರಾದ ಈ.ತುಕಾರಾಂ, ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ, ರಾಯಚೂರು ಸಂಸದರಾದ ಜಿ.ಕುಮಾರ್ ನಾಯಕ, ಕೂಡ್ಲಿಗಿ ಶಾಸಕರಾದ ಡಾ ಶ್ರೀನಿವಾಸ್ ಎನ್.ಟಿ., ಹೂವಿನಹಡಗಲಿ ಶಾಸಕರಾದ ಎಲ್.ಕೃಷ್ಣ ನಾಯಕ, ಹರಪ್ಪನಹಳ್ಳಿ ಶಾಸಕರಾದ ಎಂ.ಪಿ ಲತಾ ಮಲ್ಲಿಕಾರ್ಜುನ್, ವಿಧಾನ ಪರಿಷತ್ ಸದಸ್ಯರುಗಳಾದ ಬಸನಗೌಡ ಬಾದರ್ಲಿ, ತುಂಗಭದ್ರ ಯೋಜನೆ ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್‌ಸಾಬ್ ನಬೀಬ್ ಸಾಬ್ ದೋಟಿಹಾಳ, ಹೊಸಪೇಟೆಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಎಚ್.ಎನ್.ಎಫ್ ಮಹಮದ್ ಇಮಾಮ್ ನಿಯಾಜಿ, ಹೊಸಪೇಟೆ ನಗರಸಭೆ ಅಧ್ಯಕ್ಷರಾದ ರೂಪೇಶ್ ಕುಮಾರ್ ಎನ್., ಮುನಿರಾಬಾದ್ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಯುಬ್ ಖಾನ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೊಹನ್ ರಾಜ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಕೃಷ್ಣ ಭಾಜಪೇಯಿ, ವಿಜಯನಗರ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನೋಂಗ್ಜಾಯ ಮೋಹಮ್ಮದ್ ಅಲಿ ಅಕ್ರಮ್ ಷಾ, ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಬಿ.ಎಸ್. ಲೋಕೇಶ್ ಕುಮಾರ್, ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ ರಾಮ್ ಎಲ್. ಅರಸಿದ್ದಿ, ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್. ಹಾಗೂ ಎಲ್ಲಾ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಬಿ.ಕುಲಕರ್ಣಿ, ಕರ್ನಾಟಕ ನೀರಾವರಿ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಶ ಅಮ್ಮನಬಾವಿ, ತುಂಗಭದ್ರಾ ಬೋರ್ಡ್ ಕಾರ್ಯದರ್ಶಿಗಳಾದ ಒ.ಆರ್.ಕೆ. ರೆಡ್ಡಿ, ಕ.ನೀ.ನಿ.ನಿ, ನೀ.ಕೇ.ವ. ಮುನಿರಾಬಾದ್ ಮುಖ್ಯ ಅಭಿಯಂತರರಾದ ಹನುಮಂತ ಜಿ ದಾಸರ, ಮುನಿರಾಬಾದ್ ತುಂಗಭದ್ರ ಯೋಜನ ವೃತ್ತದ ಅಧೀಕ್ಷಕ ಅಭಿಯಂತರರಾದ ಎಲ್.ಬಸವರಾಜ್, ತುಂಗಭದ್ರಾ ಬೋರ್ಡ್ ಅಧೀಕ್ಷಕ ಅಭಿಯಂತರರಾದ ಶ್ರೀಕಾಂತ್ ರೆಡ್ಡಿ, ರಾಯಚೂರು ಜಿಲ್ಲೆಯ ಯರಮರಸ್ ಕ್ಯಾಂಪ್ ತುಂಗಭದ್ರ ಕಾಲುವೆ ನಿರ್ಮಾಣ ವೃತ್ತದ ಅಧೀಕ್ಷಕ ಅಭಿಯಂತರರಾದ ಕೆ.ಬಿ.ಹೆಚ್ ಶಿವಶಂಕರ್, ಮುನಿರಾಬಾದ್ ಕ.ನೀ.ನಿ.ನಿ ನಂ.1 ತುಂಗಭದ್ರಾ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಗಿರೀಶ್ ಸಿ ಮೇಟಿ, ತುಂಗಭದ್ರಾ ಬೋರ್ಡ್ ಕಾರ್ಯಪಾಲಕ ಅಭಿಯಂತರರಾದ ಜಿ.ಟಿ. ರವಿಚಂದ್ರ, ಮುನಿರಾಬಾದ್ ಕ.ನೀ.ನಿ.ನಿ ಮುಖ್ಯ ಕಾಮಗಾರಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಧರ್ಮರಾಜ ಎಲ್ ಅವರು ಉಪಸ್ಥಿತರಿದ್ದರು. ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸ್ವಾಗತಿಸಿದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.