Breaking News

ಅಂಗನವಾಡಿ ಮೇಲ್ಛಾವಣಿ ಕುಸಿತ : 4 ಮಕ್ಕಳಿಗೆ ಘಾಯ,,

Anganwadi roof collapse: 4 children injured

ಜಾಹೀರಾತು

ವರದಿ : ಪಂಚಯ್ಯ ಹಿರೇಮಠ.
ಕೊಪ್ಪಳ : ಮೇಲ್ಛಾವಣಿ ಕುಸಿದು ಬಿದ್ದು ನಾಲ್ಕು ಮಕ್ಕಳು ಗಾಯಗೊಂಡ ಘಟನೆ ಗಂಗಾವತಿಯ ಮೆಹಬೂನ್ ನಗರದ 07ನೇ ವಾರ್ಡಿನ 11ನೇ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ನಡೆದಿದೆ.

ಗಾಯಗೊಂಡ ಮಕ್ಕಳನ್ನು ಅಮನ್, ಮನ್ವಿತ್, ಮರ್ದಾನ್,‌ ಸುರಕ್ಷಾ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಅಂಗನವಾಡಿ ಕೇಂದ್ರದಲ್ಲಿ 20 ಕ್ಕೂ ಹೆಚ್ಚು ಮಕ್ಕಳು ಆಟವಾಡುತ್ತಿದ್ದರು.

ನಗರಸಭೆಯ ಅಧ್ಯಕ್ಷ ಮೌಲಾಸಾಬ್, ವಾರ್ಡ್ ಸದಸ್ಯಮನೋಹರಸ್ವಾಮಿ, ಸಿಡಿಪಿಓ ಜಯಶ್ರೀ ದೇಸಾಯಿ, ಮೇಲ್ವಿಚಾರಕಿ ಚಂದ್ರಮ್ಮ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಗಾಯಗೊಂಡ ಮಕ್ಕಳನ್ನು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಂಗಾವತಿಯ 11ನೇ ಅಂಗನವಾಡಿ ಕೇಂದ್ರದ ಕಟ್ಟಡವು ಕೇವಲ 7 ವರ್ಷದ ಹಿಂದೆ ನಿರ್ಮಿಸಿದ್ದು, ಕೆಲವೇ ವರ್ಷಗಳಲ್ಲಿ ಮೇಲ್ಛಾವಣಿ ಕುಸಿದಿರುವುದು ಹಲವು ಅನುಮಾನಗಳನ್ನು ಸಾರ್ವಜನಿಕರಲ್ಲಿ ಸೃಷ್ಟಿಸಿವೆ.

About Mallikarjun

Check Also

76 ಮೈಲ್ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಅನ್ನದಾತರ ಹೋರಾಟ ಒಣಗುವ ಸ್ಥಿತಿಯಲ್ಲಿರುವ ಜೋಳ ಬೆಳೆ ಉಳಿಸಿಕೊಡಿ ಎಂದ ರೈತರು.

The farmers have demanded that the 76-mile canal be drained of water, and the farmers …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.