Application Invitation for Rented Building for Dormitories
ಕೊಪ್ಪಳ ಸೆಪ್ಟಂಬರ್ 23 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕೊಪ್ಪಳ ನಗರಕ್ಕೆ ಹೊಸದಾಗಿ ಮಂಜೂರಾಗಿರುವ 100 ಸಂಖ್ಯಾಬಲದ ಎರಡು (2) ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳ ನಿರ್ವಹಣೆಗಾಗಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ಬಾಡಿಗೆ ಕಟ್ಟಡ ಒದಗಿಸಲು ಇಚ್ಚೆಯುಳ್ಳ ಕಟ್ಟಡದ ಮಾಲೀಕರು ಅಗತ್ಯ ಮಾಹಿತಿಯೊಂದಿಗೆ ಸೆಪ್ಟಂಬರ್ 27ರ ಸಂಜೆ 5.30 ರೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಿದೆ . ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೊಪ್ಪಳ ಕಚೇರಿ ದೂರವಾಣಿ ಸಂಖ್ಯೆ 08539-221606 ಗೆ ಹಾಗೂ ನೇರವಾಗಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.