Breaking News

ಗಣೇಶನನ್ನು ವಿಸರ್ಜಿಸಿ ಮನೆಗೆ ಬರುವಾಗ ರಸ್ತೆ ಅಪಘಾತದಲ್ಲಿ ಯುವಕ ಸಾವು

A young man died in a road accident while returning home after worshiping Ganesha

ಜಾಹೀರಾತು

ಗಂಗಾವತಿ: ಗಣೇಶನನ್ನು ವಿಸರ್ಜಿಸಿ ಮನೆಗೆ ಬರುವಾಗ ರಸ್ತೆ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ತಾಲೂಕಿನ ಬಸಾಪಟ್ಟಣ ರಸ್ತೆಯ ಕೆ ಎಲ್ ಇ ಕಾಲೇಜ್ ಬಳಿ ಸೋಮವಾರ ಮಧ್ಯರಾತ್ರಿ ನಡೆದಿದೆ ನವೀನ್ ಕುಮಾರ್ (೨೭) ಎಂಬ ಯುವಕ ನಗರದ ಉಪ್ಪಾರ ಓಣಿಯ ಭಗಿರಥದಲ್ಲಿ ವೃತ್ತದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶನನ್ನು ವಿಸರ್ಜನೆ ಮಾಡಿ ಬೈಕ್ ನಲ್ಲಿ ವಾಪಸ್ ಬರುವ ವೇಳೆ ಬಸಾಪಟ್ಟಣ ರಸ್ತೆಯ ಕೆಎಲ್ಇ ರಸ್ತೆಯಲ್ಲಿ ಟ್ಯಾಂಕರ್ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಂಗಾವತಿ ಸರಕಾರಿ ಆಸ್ಪತ್ರೆಯಲ್ಲಿ ಮೃತ ದೇಹದ ವೈದ್ಯಕೀಯ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ.

About Mallikarjun

Check Also

ಸೆ. 2 ಮತ್ತು 3 ರಂದು ವಿವಿಧ ಇಲಾಖೆಗಳ ಗ್ರೂಪ್ ಸಿ ಹುದ್ದೆಗಳ ಪರೀಕ್ಷೆ: ನಿಷೇಧಾಜ್ಞೆ ಜಾರಿ

Exams for Group C posts of various departments on Sept. 2 and 3: Prohibitory order …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.