Breaking News

ಮೊಬೈಲ್ ತಂತ್ರಾಂಶಗಳಿಂದ ಕೆಲಸ ಮಾಡಲಾಗದು ಕಂದಾಯ ಇಲಾಖೆ ಅಧಿಕಾರಿಗಳಿಂದ ವಿರೋಧಿಸಿ ಮನವಿ

Complaint against revenue department officials as mobile software cannot work

ಜಾಹೀರಾತು

ಕೂಡ್ಲಿಗಿ:ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದ ಪದಾಧಿಕಾರಿಗಳು ಮೊಬೈಲ್ ಆ್ಯಪ್ ಮತ್ತು ವೆಬ್ ಅಪ್ಲಿಕೇಶನ್ ಮೂಲಕ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡು ಗ್ರೇಡ್ 2 ತಹಸೀಲ್ದಾರ್ ವಿ.ಕೆ.ನೇತ್ರಾವತಿ ಮುಖಾಂತರ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿದರು. ಕಂದಾಯ ಇಲಾಖೆ ಅಭಿವೃದ್ಧಿ ಪಡಿಸಿರುವ ಸುಮಾರು 17 ಕ್ಕೂ ಹೆಚ್ಚು ಮೊಬೈಲ್ ಹಾಗೂ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯವಾಗಿರುವ ಇಂಟರ್ ನೆಟ್ ಹಾಗೂ ಸ್ಕ್ಯಾನರ್ ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಕ್ಷೇತ್ರ ಮಟ್ಟದಲ್ಲಿ ಅಧಿಕ ಒತ್ತಡದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳು ಕಾರ್ಯ ನಿರ್ವಹಣೆ ಮಾಡಿ ಸಾವು,ನೋವುಗಳು ಸಂಭವಿಸುತ್ತಿವೆ. ಎಲ್ಲಾ ಮೊಬೈಲ್ ಆ್ಯಪ್ ಗಳಲ್ಲಿ ಏಕ ಕಾಲದಲ್ಲಿ ತೀವ್ರ ಒತ್ತಡ ಹೇರುತ್ತಿರುವುದರಿಂದ ಅಧಿಕಾರಿಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ತೊಂದರೆ ಅನುಭವಿಸುವಂತಾಗಿದೆ.ಆದ್ದರಿಂದ ನಮಗೆ ವೃತ್ತಕ್ಕೆ ಒಂದರಂತೆ ಮೊಬೈಲ್, ಲ್ಯಾಪ್‌ಟಾಪ್, ಗೂಗಲ್ ಕ್ರೋಮ್ ಬುಕ್, ಪ್ರಿಂಟರ್, ಇಂಟರ್ನೆಟ್ ಸೌಲಭ್ಯಗಳನ್ನು ನೀಡುವವರೆಗೂ ಆಧಾರ್ ಸೀಡ್, ಲ್ಯಾಂಡ್ ಬೀಟ್, ಬಗರ್ ಹುಕುಂ, ಹಕ್ಕುಪತ್ರ, ನಮೂನೆ1-5 ರ ವೆಬ್ ಅಪ್ಲಿಕೇಶನ್, ಪೌತಿ ಆಂದೋಲನ ಆ್ಯಪ್ ತಂತ್ರಾಂಶಗಳ ಕಾರ್ಯ ನಿರ್ವಹಿಸಲು ಮುಷ್ಕರ ಮಾಡಲಾಗವುದು ಜತೆಗೆ ನಮಗೆ ಮೂಲ ಸೌಲಭ್ಯಗಳಾದ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ,ಅಲ್ಮೇರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್, ಸಿಯುಜಿ ಸಿಮ್, ಸ್ಕ್ಯಾನರ್ ಸೇರಿದಂತೆ ನಮ್ಮ ನಾನಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಗ್ರೇಡ್ 2 ತಹಸೀಲ್ದಾರ್ ವಿ.ಕೆ.ನೇತ್ರಾವತಿ ಮನವಿ ಸ್ವೀಕಾರ ಮಾಡಿದರು. ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಮರುಳಸಿದ್ದಪ್ಪ ಎನ್.ಯು, ಉಪಾಧ್ಯಕ್ಷ ಶ್ರೀನಿವಾಸ್ ಕೊಂಡಿ, ಗೌರವಾಧ್ಯಕ್ಷ ಚನ್ನಬಸಯ್ಯ, ಅಂಬುಜಾಕ್ಷಿ, ಶೋಭಾ, ಚೌಡಪ್ಪ, ಪ್ರಭು ತಳವಾರ, ಕೊಟ್ರೇಶ್, ವೀರೇಶ್. ಪಿ, ಪಾರ್ವತಿ, ಸಂಗೀತಾ, ನೇತ್ರಾವತಿ ಸೇರಿದಂತೆ ಅನೇಕರು ಇದ್ದರು.

About Mallikarjun

Check Also

ಎಫ್.ಕೆ.ಸಿ.ಸಿ.ಐನಿಂದ ಶನಿವಾರ ಉದ್ಯೋಗ ಉತ್ಸವ್ 2025 –26 ; 6 ವಲಯಗಳಲ್ಲಿ 6 ಸಾವಿರ ಉದ್ಯೋಗಾವಕಾಶಗಳು ಲಭ್ಯ

FKCCI to hold Saturday Udyog Utsav 2025-26; 6,000 job opportunities available in 6 zones ಬೆಂಗಳೂರು, …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.