Four children were seriously injured after the roof of the Anganwadi center collapsed

ಗಂಗಾವತಿ: ನಗರದ ೭ನೇ ವಾರ್ಡ್ನ ೧೧ನೇ ಅಂಗನವಾಡಿ ಕೇಂದ್ರದಲ್ಲಿ ಮೇಲ್ಚಾವಣಿ ಕುಸಿದು ನಾಲ್ಕು ಮಕ್ಕಳಿಗೆ ಗಂಭೀರ ಗಾಯವಾಗಿದ್ದು, ಈ ಕಟ್ಟಡ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರ ಮತ್ತು ಗುತ್ತಿಗೆ ನೀಡಿದ ನಗರಸಭೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಸಿಪಿಐಎಂಎಲ್ ಲಿಬರೇಶನ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ವಿಜಯ ದೊರೆರಾಜು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಇಂದು ನಗರದ ೭ನೇ ವಾರ್ಡಿನ ೧೧ನೇ ಅಂಗನವಾಡಿ ಕೇಂದ್ರ ಹಾಗೂ ಗಾಯಗೊಂಡು ಆಸ್ಪತ್ರೆಗೆ ಭೇಟಿ ನೀಡಿದ ಸಿಪಿಐಎಂಎಲ್ ಲಿಬರೇಶನ್ ತಂಡ ಅಂಗನವಾಡಿ ಕೇಂದ್ರ ಪಸರಿಸಿ ನೋಡಲಾಗಿ ಗುತ್ತಿಗೆದಾರರು ಕಟ್ಟಡ ಕಾಮಗಾರಿಯನ್ನು ಕಳಪೆ ಗುಣಮಟ್ಟದಲ್ಲಿ ಮಾಡಿರುವುದೇ ಈ ದುರ್ಘಟನೆಗೆ ಕಾರಣವಾಗಿದೆ. ಕೂಡಲೇ ಕಳಪೆ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರ ಮತ್ತು ಅದಕ್ಕೆ ಸಹಕರಿಸಿದ ನಗರಸಭೆ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಮತ್ತು ಗಾಯಗೊಂಡ ಮಕ್ಕಳಿಗೆ ಸೂಕ್ತ ಪರಿಹಾರ ನೀಡಿ ಮತ್ತೊಂದು ಸಾರಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳ ಗುಣಮಟ್ಟವನ್ನು ಪರಿಸಿಲಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.