ಕಲ್ಯಾಣಸಿರಿ ವಿಶೇಷ

ಪತ್ರಕರ್ತರ ಉಚಿತ ಬಸ್ ಪಾಸ್ಅವೈಜ್ಞಾನಿಕ : ಮಲ್ಲಿಕಾರ್ಜುನ್ ಬಂಗ್ಲೆ,

Free bus pass for journalists is unscientific: Mallikarjun Bangle

ವರದಿ : ಪಂಚಯ್ಯ ಹಿರೇಮಠ,,
ಕೊಪ್ಪಳ : ರಾಜ್ಯ ಸರಕಾರ ಗ್ರಾಮೀಣ ಪತ್ರಕರ್ತರಿಗೆ ಗುರವಾರದಂದು ನೀಡಿರುವ ಉಚಿತ ಬಸ್ ಪಾಸ್ ಜಾರಿ ಅವೈಜ್ಞಾನಿಕವಾದ ಆದೇಶವಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ಖಂಡನೆ ವ್ಯಕ್ತಪಡಿಸಿದರು.

ಬಂಗ್ಲೆಯವರು ನಮ್ಮ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ ರಾಜ್ಯದ 200 ತಾಲೂಕುಗಳಲ್ಲಿ ಕೆಲಸ ಮಾಡುವ ತಾಲೂಕ ಮಟ್ಟದ ಪತ್ರಕರ್ತರಿಗೆ ಆಯಾ ಪತ್ರಿಕಾ ಸಂಸ್ಥೆಗಳು ಖಾಯಂ ನೇಮಕಾತಿ ಆದೇಶ ಪತ್ರ ನೀಡಿರುವುದಿಲ್ಲಾ.

ಹೀಗಿರುವಾಗ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ವಿಷಯಕ್ಕೆ ಸಂಬಂಧಿಸಿದಂತೆ ಗುರುವಾರ ಸರ್ಕಾರದಿಂದ ಹೊರಡಿಸಿರುವ ಆದೇಶ ಅವೈಜ್ಞಾನಿಕವಾಗಿದೆ ಎಂದು ಹೇಳಿದರು.

ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಖಾಯಂ ಪತ್ರಕರ್ತರೆಂದು ನೇಮಕಾತಿ ಆದೇಶ ಪ್ರತಿ ಕೊಟ್ಟಿರುವುದಿಲ್ಲಾ, ಆದರೆ ಸರ್ಕಾರ ಈ ಆದೇಶ ಪ್ರತಿ ಕೇಳಿರುವುದು ಹಾಸ್ಯಸ್ಪದ ಸಂಗತಿಯಾಗಿದೆ ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆದೇಶವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದರು.

ರಾಜ್ಯದ ಮಹಿಳೆಯರಿಗೆ ಬಸ್ ಗಳಲ್ಲಿ ಸಂಚರಿಸಲು 1800 ಕೋಟಿ ರೂ.ಗಳ ವೆಚ್ಚವನ್ನು ನೀಡಿರುವ ಸರಕಾರ ಯಾವುದೇ ಮಾನದಂಡಗಳನ್ನು ಕೇಳಿಲ್ಲಾ, ಆದರೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಕರ್ತರು ಸಮಾಜದಲ್ಲಿ ಜನರ ಕೊಂಡಿಯಾಗಿ ಕೆಲಸ ಮಾಡುತ್ತಿರುವವರಿಗೆ ಈ ವಿಷಯದಲ್ಲಿ ಇಂತಹ ಧೋರಣೆ ತಳೆದಿರುವುದು ಸರಿಯಾದ ಕ್ರಮವಲ್ಲಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಹೊರಡಿಸಿರುವ ಆದೇಶದಂತೆ ರಾಜ್ಯಾದ್ಯಂತ 100 ಅರ್ಜಿ ಸಲ್ಲಿಕೆಯಾದರೆ ಹೆಚ್ಚು ಎಂದಿರುವ ಮಲ್ಲಿಕಾರ್ಜುನ್ ಬಂಗ್ಲೆ, 5222 ಪತ್ರಕರ್ತರಲ್ಲಿ ಖಾಯಂ ನೇಮಕಾತಿ ಪತ್ರ ಎಷ್ಟು ಜನರ ಬಳಿ ಇದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ ಎಂದು ಪ್ರಶ್ನಿಸಿದರು.

ಈ ಆದೇಶವು ನಾಯಿಯ ಜೇನು ಇದ್ದಂತೆ ಇದು ಪೂಜೆಗೂ ಬರುವುದಿಲ್ಲಾ ಮತ್ತು ತಿನ್ನಲು ಬರುವುದಿಲ್ಲಾ ಆದರೆ ಸರ್ಕಾರ ಪತ್ರಕರ್ತರಿಗೆ ಬಸ್ ಪಾಸ್ ಕೊಟ್ಟಿರುವುದಾಗಿ ಬಡಾಯಿ ಕೊಚ್ಚಿಕೊಳ್ಳುತ್ತಿದ್ದು ಪತ್ರಕರ್ತರ ಕಿವಿಯ ಮೇಲೆ ಹೂವಿಟ್ಟಂತಾಗಿದೆ ಎಂದು ಟೀಕಿಸಿದರು.

ಕೂಡಲೇ ಆದೇಶವನ್ನು ಮಾರ್ಪಡಿಸಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸುವ ಕಾರ್ಯ ಮಾಡಬೇಕು ಎಂದು ಆಗ್ರಹಿಸಿದರು.

ಇಲ್ಲದಿದ್ದಲ್ಲಿ ಈ ಆದೇಶದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲಾಗುವುದು. ಹಾಗೆಯೇ ಇದರ ವಿರುದ್ಧ ರಾಜ್ಯಾದ್ಯಾಂತ ಹೋರಾಟವನ್ನು ಸಂಘಟಿಸಲಾಗುತ್ತದೆ ಎಂದು ಎಚ್ಚರಿಸಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago