Breaking News

ಅ ಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡಿ–ಗ್ರಾ. ಪಂ ಅಧ್ಯಕ್ಷ ಎ.ಸಿ. ಚೇತನ್

Donate blood to save precious lives–gr. PT President A.C. Chetan

IMG 20240928 WA0257


ಕಾನ ಹೊಸಹಳ್ಳಿ: ಅಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಗ್ರಾಪಂ ಅಧ್ಯಕ್ಷ ಎ.ಸಿ.ಚೇತನ್ ಹೇಳಿದರು..ಪಟ್ಟಣದ ಕೆಎಸ್ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ

IMG 20240928 WA0256 1024x768

ಪ್ರಾಥಮಿಕ ಆರೋಗ್ಯ ಕೇಂದ್ರ ಕಾನ ಹೊಸಹಳ್ಳಿ ಇವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಸ್ವಯಂ ಪ್ರೇರಿತಾ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದದರು ರಕ್ತದಾನ ಮಹಾದಾನ ವಾಗಿದೆ. ಅಪಘಾತ ಹಾಗೂ ಇತರ ತುರ್ತು ಚಿಕಿತ್ಸೆ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಬಹಳ ಇರುತ್ತದೆ. ಕೆಲವುಸಮಯ ದಲ್ಲಿ ಅಪಘಾತಕ್ಕೀಡದವರು ಹಲವಾರು ರೋಗಗಳಿಂದ ಬಳಲುತ್ತಿರುವ ರೋಗಿಗಳಿಗೆ ರಕ್ತದ ಅವಶ್ಯಕತೆ ಬಹಳ ಇರುತ್ತದೆ ಅಂತಹ ಸಮಯಗಳಲ್ಲಿ ರಕ್ತ ಸಿಗದೇ ಸಾವಿಗೀಡಾಗುತ್ತಿದ್ದಾರೆ. ಅಮೂಲ್ಯವಾದ ಜೀವಗಳನ್ನು ಉಳಿಸಲು ರಕ್ತದಾನ ಮಾಡುವುದು ಅತಿ ಅಗತ್ಯವಾಗಿದ್ದು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.

IMG 20240928 WA0251 1024x576


ಈ ಸಂದರ್ಭದಲ್ಲಿ ಹೊಸಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ ವಿಶ್ವನಾಥ್ ಮಾತನಾಡಿ ಸಾಮಾನ್ಯವಾಗಿ ರಸ್ತೆ ಅಪಘಾತದಲ್ಲಿ ರಕ್ತಸ್ರಾವಗೊಂಡ ರೋಗಿಗಳು ಮತ್ತು ಹೆರಿಗೆ ಸಂದರ್ಭದಲ್ಲಿ ಗರ್ಭಿಣಿಯರಿಗೆ ರಕ್ತದ ಅವಶ್ಯಕತೆ ಇರುತ್ತದೆ. ಇಂಥ ಸಂದರ್ಭದಲ್ಲಿ ರಕ್ತದಾನಿಗಳು ನೀಡುವ ರಕ್ತ ಮಹತ್ವ ಪಡೆಯುತ್ತದೆ. ಒಬ್ಬರ ರಕ್ತದಾನದಿಂದ ಮೂರು ಜನರ ಪ್ರಾಣ ಉಳಿಸಬಹುದಾಗಿದೆ ಎಂದು ಹೇಳಿ ರಕ್ತದಾನದ ಮಹತ್ವವನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ನೇತ್ರಾವತಿ ಮಂಜುನಾಥ, ವೈದ್ಯಾಧಿಕಾರಿ ಡಾ ಅಭಿಷೇಕ್, ಎಲ್ಎಚ್.ವಿ ಭಾರತಿ, ರಾಘವರಡ್ಡಿ, ಕೃಷ್ಣ, ಮಹೇಂದ್ರ, ಕಿ.ಪ್ರ.ತಾ. ಅಧಿಕಾರಿ ಸೋಮಶೇಖರ್ ಕೆ.ಆರ್, ಪ್ರಸಾದ್, ಬೋರಣ್ಣ, ಶಶಿಧರ, ರಮ್ಯಾ ಇ.ಎಸ್, ಸುಧಾ, ರೇಖಾ, ಸವಿತಾ, ಆಶ್ರೀಫ್ ಬಾನು, ಸುರೇಶ್ ಸೇರಿದಂತೆ ಗ್ರಾ.ಪಂ ಸರ್ವ ಸದಸ್ಯರು, ಮುಖಂಡರು, ಆಶಾ ಕಾರ್ಯಕರ್ತೆಯರು ಮತ್ತು ರಕ್ತ ಧಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About Mallikarjun

Check Also

screenshot 2025 12 17 18 45 28 37 e307a3f9df9f380ebaf106e1dc980bb6.jpg

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ ಕುಮಾರ್

ಉದ್ಯೋಗ ಖಾತ್ರಿ ಸೇರಿ ಮಹತ್ವದ ಯೋಜನೆಗಳ ಬದಲಾವಣೆಯಿಂದ ಬಡವರಿಗೆ ಅನ್ಯಾಯ: ಎಐಸಿಸಿ ಎಸ್.ಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಡಾ. ಆನಂದ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.