ಕಲ್ಯಾಣಸಿರಿ ವಿಶೇಷ

ಪೌರಸೇವ ನೌಕರರ ವಿವಿಧ ಬೇಡಿಕೆಗಳನ್ನು ಈಡೆರಿಸುವಂತೆ ಸಚಿವರಿಗೆ ಮನವಿ



A request to the Minister to fulfill the various demands of the civil service employees

ಮಾನ್ವಿ: ಪಟ್ಟಣದ ಪುರಸಭೆ ಆವರಣದಲ್ಲಿ ಕರ್ನಾಟಕ ರಾಜ್ಯ ಪೌರಸೇವ ನೌಕರರ ಸೇವಾ ಸಂಘದ ತಾಲೂಕು ಘಟಕ ವತಿಯಿಂದ ನಡೆದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ರವರಿಗೆ ಅಖಿಲ ಕರ್ನಾಟಕ ರಾಜ್ಯ ಪೌರಸೇವ ನೌಕರರ ಸೇವಾ ಸಂಘದ ರಾಜ್ಯಾಧ್ಯಕ್ಷರಾದ ಹಂಪಯ್ಯ ಪಾಟೀಲ್ ವಿವಿಧ ಬೇಡಿಕೆಗಳನ್ನು ಈಡೆರಿಸುವಂತೆ ಮನವಿ ಸಲ್ಲಿಸಿ ಮಾತನಾಡಿ ತಾವುಗಳು ಮುಖ್ಯಮಂತ್ರಿಗಳು ಹಾಗೂ ಪೌರಾಡಳಿತ ಸಚಿವರಲ್ಲಿ ಮಾತನಾಡಿ ರಾಜ್ಯದಲ್ಲಿ ಸಮುದಾಯ ಸಂಘಟನಾಧಿಕಾರಿಗಳಾಗಿ ವಿವಿಧ ಪುರಸಭೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಅವರನ್ನು ತಮ್ಮ ಸ್ವಂತ ವೇತನ ಶ್ರೇಣಿಯಲ್ಲಿ ಮುಖ್ಯಾಧಿಕಾರಿ ಮತ್ತು ಪೌರಾಯುಕ್ತರನ್ನಾಗಿ ಅವಕಾಶ ಮಾಡಿಕೊಡಬೇಕು.ರಾಜ್ಯದಲ್ಲಿ ಸಮುದಾಯ ಸಂಘಟನಾಧಿಕಾರಿ ಖಾಲಿ ಇರುವ ಹುದ್ದೆಗಳಿಗೆ ರಾಜ್ಯಗಳಲ್ಲಿ ಈಗಾಗಲೇ 26 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಸಂಘಟಕರಿಗೆ ಸಮುದಾಯ ಸಂಘಟನಾಧಿಕಾರಿಗಳಾಗಿ ಮುಂಬಡ್ತಿ ನೀಡಬೇಕು. ಹಿರಿಯ ಆರೋಗ್ಯ ನಿರೀಕ್ಷಕರಿಗೆ ಕೆ.ಎಮ್.ಎಸ್ ಗೆ ಮುಂಬಡ್ತಿ ನೀಡಬೇಕು ಗುತ್ತಿಗೆ ಆಧಾರದ ಮೇಲೆ ಹಾಗೂ ದಿನಗೂಲಿಯಲ್ಲಿ ಅನೇಕ ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಸಿನಿಯರ್ ಮತ್ತು ಜೂನಿಯರ್ ಪ್ರೋಗ್ರಾಮರ್ ಗಳನ್ನು , ಅಕೌಂಟೆಂಟ್‌ಗಳನ್ನು, ನೀರು ಸರಬರಾಜು ಸಿಬ್ಬಂದಿಗಳನ್ನು ,ಪೌರಕಾರ್ಮಿಕರನ್ನು,ವಿದ್ಯುತ್ ಲೈನ್ ಮ್ಯಾನ್ ಗಳನ್ನು ಕ್ಷೇಮಾಭಿವೃದ್ದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ನೌಕರರನ್ನು ಕಾಯಂ ಮಾಡುವ ಮೂಲಕ ಅವರಿಗೆ ಸೇವಾ ಭದ್ರತೆಯನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ಮಾನ್ವಿ ಪುರಸಭೆಯ ಆರೋಗ್ಯ ನಿರೀಕ್ಷಕರಾದ ಮಹೇಶ ಸೇರಿದಂತೆ ಪುರಸಭೆ ಸಿಬ್ಬಂದಿಗಳು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago