Breaking News

ಅಕ್ಟೋಬರ್-೨ ರಂದು ಆನೆಗುಂದಿಯಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಾಣಕ್ಕೆ ಸ್ಥಳಪರಿಶೀಲನೆಗೆ ರಾಹುಲ್ ರತ್ನಂ ಪಾಂಡೆ ಭರವಸೆ: ಸಿಂಧೂ ಡಿ

Rahul Ratnam Pandey promises site inspection for construction of toilet in Anegundi on Oct-2: Sindhu D

ಜಾಹೀರಾತು

ಗಂಗಾವತಿ: ತಾಲೂಕಿನ ಆನೆಗುಂದಿ ಗ್ರಾಮವು ಐತಿಹಾಸಿಕ, ಪುರಾಣ, ಪೌರಾಣಿಕ ಹಾಗೂ ವಿಶ್ವ ಪಾರಂಪರಿಕ ಪ್ರಸಿದ್ಧ ಪ್ರದೇಶವಾಗಿದ್ದು, ಈ ಪ್ರದೇಶಕ್ಕೆ ದೇಶ-ವಿದೇಶಗಳಿಂದ ಹಲವಾರು ಪ್ರವಾಸಿಗರು ಬಂದು ವೀಕ್ಷಿಸಿ ಹೋಗುವಂತಹ ಸ್ಥಳವಾಗಿರುತ್ತದೆ. ದುರಂತವೇನೆAದರೆ, ಆನೆಗುಂದಿ ಭಾಗದಲ್ಲಿ ಸಾರ್ವಜನಿಕರಿಗೆ ಶೌಚಾಲಯ ಇರುವುದಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಜಿಲ್ಲಾಡಳಿತಕ್ಕೆ, ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿರುವುದಿಲ್ಲ. ಈಗ ಜಿಲ್ಲಾ ಪಂಚಾಯತ್‌ನ ಸಿ.ಇ.ಓ ಆದ ರಾಹುಲ್ ರತ್ನಂ ಪಾಂಡೆ ಅವರು ಆನೆಗೊಂದಿಯಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಲು ಅಕ್ಟೋಬರ್-೨ ರಂದು ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಪರಿಸರ ಪ್ರೇಮಿಯಾದ ಕೇಂದ್ರೀಯ ವಿದ್ಯಾಲಯದ ೮ನೇ ತರಗತಿ ವಿದ್ಯಾರ್ಥಿನಿ ಸಿಂಧು ಡಿ ರವರು ಹರ್ಷ ವ್ಯಕ್ತಪಡಿಸಿದರು.
ಈ ಭಾಗದಲ್ಲಿ ಶಾರ್ವಜನಿಕ ಶೌಚಾಲಯ ಇಲ್ಲದೇ ಸುತ್ತ-ಮುತ್ತಲಿನ ಪ್ರದೇಶದಲ್ಲಿರುವ ಹೋಟೆಲ್‌ಗೆ ಹೋಗಿ ಶೌಚಾಲಯ ಉಪಯೋಗಿಸಿಕೊಂಡು ಬರುವ ಸ್ಥಿತಿ ಬಂದೊದಗಿರುತ್ತದೆ. ಪ್ರಸ್ತುತ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅವರು ಶೌಚಾಲಯ ನಿರ್ಮಾಣಕ್ಕೆ ಮುಂದಾಗಲು ಭರವಸೆ ನೀಡಿದ್ದು, ಈ ಭಾಗದ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಹರ್ಷದಾಯಕವಾಗಿದೆ. ಶೌಚಾಲಯ ನಿರ್ಮಾಣ ಕಾರ್ಯಕ್ಕೆ ಅಕ್ಟೋಬರ್-೨ ಬೆಳಿಗ್ಗೆ ೧೧ ರವರೆಗೆ ಕಾಯ್ದು, ಒಂದು ವೇಳೆ ಮಾತು ತಪ್ಪಿದಲ್ಲಿ ಬೆಳಿಗ್ಗೆ ೧೧ ಗಂಟೆಯ ನಂತರ ಪ್ರತಿಭಟನೆ ನಡೆಸಲಗುವುದು

About Mallikarjun

Check Also

ತೆಲಗಿ ಮಾದರಿಯಲ್ಲಿ ಮತ್ತೊಂದು ಭಾರೀ ನಕಲಿ ಛಾಪಾ ಕಾಗದ ಹಗರಣ

Another massive fake printing paper scam on the Telugu model ಕಾನೂನು ಬಾಹಿರ ಫ್ರಾಂಕಿಂಗ್ ಮೂಲಕ ಸರ್ಕಾರದ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.