Breaking News

ಕೊಪ್ಪಳ ಕೋಟೆ ಆವರಣದಲ್ಲಿ ಅರ್ಥಯುತವಾಗಿ ನಡೆದ ಶ್ರಮದಾನ

Shramadana was meaningfully held in the Koppal fort premises

ಜಾಹೀರಾತು

ಕೊಪ್ಪಳ ಅಕ್ಟೋಬರ್ 1 (ಕರ್ನಾಟಕ ವಾರ್ತೆ: ಬಯಲುಸೀಮೆಯ ಕೊಪ್ಪಳ ನಗರಕ್ಕೆ ವಿಶೇಷ ಮೆರುಗು ನೀಡುವ ಕೊಪ್ಪಳ ಕೋಟೆ ಅಂಗಳವು ಅಕ್ಟೋಬರ್ 1ರಂದು ವಿಶಿಷ್ಟ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು.
ನಿತ್ಯ ಕಚೇರಿಯ ಹತ್ತು ಹಲವಾರು ಕಾರ್ಯಗಳಲ್ಲಿ ಮುಳುಗಿರುವ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್.ಅರಸಿದ್ಧಿ ಅವರು ಕಾರ್ಯದೊತ್ತಡದ ಮಧ್ಯೆಯೂ ಬೆಳ್ಳಂಬೆಳಗ್ಗಯೇ ಕೋಟೆ ಆವರಣಕ್ಕೆ ಆಗಮಿಸಿ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗಿಯಾದರು.
ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ನಗರಸಭೆ ಪೌರಾಯುಕ್ತರಾದ ಗಣಪತಿ ಪಾಟೀಲ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್., ತಹಸೀಲ್ದಾರ ವಿಠ್ಠಲ್ ಚೌಗಲಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಶ್ರಮದಾನ ಕಾರ್ಯಕ್ರಮದಲ್ಲಿ ಭಾಗಿಯಾದರು.
ಶ್ರಮದಾನದ ಉಡುಪಿನಲ್ಲಿ ಕೋಟೆ ಅಂಗಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಇನ್ನಿತರ ವಿವಿಧ ಇಲಾಖೆಯ ಅಧಿಕಾರಿಗಳು ಸಲಿಕೆ, ಬುಟ್ಟೆ, ಕಸಬಾರಿಗೆ ಹಿಡಿದು ಕೋಟೆಯ ಆವರಣದ ವಿವಿಧ ಕಡೆ ಶುಚಿತ್ವ ಕಾರ್ಯ ನಡೆಸಿದರು.
ಈ ವೇಳೆ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಕೊಪ್ಪಳ ಕೋಟೆ ಆವರಣಕ್ಕೆ ಬಂದು ಇಲ್ಲಿ ಸುತ್ತಿದಾಗಲೇ ಕೋಟೆಯ ಮಹತ್ವ ತಿಳಿಯುತ್ತದೆ. ಕೊಪ್ಪಳ ಜನತೆ ಕೋಟೆಗೆ ಬರಬೇಕು. ಕೋಟೆಯ ಅಂಗಳದಲ್ಲಿ ಸುತ್ತಿ ಪ್ರಕೃತಿಯ ಸೊಬಗನ್ನು ಸವಿಯುವಂತಾಗಬೇಕು. ಕೊಪ್ಪಳ ಕೋಟೆಯು ಜಿಲ್ಲೆಯ ಪ್ರವಾಸೋದ್ಯಮದಲ್ಲಿ ಮಹತ್ವದ ಸ್ಥಾನ ಪಡೆಯಬೇಕು. ಈ ದಿಶೆಯಲ್ಲಿ ಜನತೆಗೆ ಉತ್ತಮ ಸಂದೇಶ ಹೋಗುವ ನಿಟ್ಟಿನಲ್ಲಿ ಮಹಾತ್ಮ ಗಾಂಧೀಜಿಯವರ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ವಾರ್ತಾ ಇಲಾಖೆಯು ವಿವಿಧ ಇಲಾಖೆಗಳ ಸಹಯೋಗದಲ್ಲಿ ರೂಪಿಸಿದ್ದ ಶ್ರಮದಾನ ಕಾರ್ಯಕ್ರಮಕ್ಕೆ ಕೊಪ್ಪಳ ಕೋಟೆಯನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ದಿ ಅವರು ಮಾತನಾಡಿ, ಮಹಾತ್ಮ ಗಾಂಧೀಜಿಯವರು ಶ್ರಮದಾನಕ್ಕೆ ವಿಶೇಷ ಆದ್ಯತೆ ನೀಡಿದ್ದರು. ಈ ದಿಶೆಯಲ್ಲಿ ಕೊಪ್ಪಳ ಜಿಲ್ಲೆಯ ಜನತೆಗೆ ಉತ್ತಮ ಸಂದೇಶ ನೀಡುವಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ನಗರಸಭೆ, ವಾರ್ತಾ ಇಲಾಖೆ ಮತ್ತು ಇನ್ನೀತರ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಅವರು ತಿಳಿಸಿದರು.
ಶ್ರಮದಾನ ಕಾರ್ಯಕ್ರಮದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರ ಸುರೇಶ ಕೋಕರೆ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಶೈಲ ಬಿರಾದಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ವಿಠ್ಠಲ್ ಜಾಬಗೌಡರ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುಸೇನ ಪೆಂಡಾರಿ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ನಗರಸಭೆಯ ಅಭಿಯಂತರರಾದ ಮಧುರಾ ಸೇರಿದಂತೆ ಇನ್ನೀತರ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

About Mallikarjun

Check Also

ಜೆಜೆಎಂ ಕಾಮಗಾರಿ ಅವೈಜ್ಞಾನಿಕ :ಮಳೆ ನೀರು ಗ್ರಾಮದೊಳಕ್ಕೆ ಸಾರ್ವಜನಿಕರಆಕ್ರೋಶ

JJM’s work is unscientific: Public outrage over rain water in the village ವರದಿ : ಪಂಚಯ್ಯ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.