Gokak Movement Retrospective Conference on 05 A.M.; District Collector Nitish K
ರಾಯಚೂರು,ಅ.೪:- ಇದೇ ಅ.05ರಂದು ನಗರದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಯಚೂರು ಜಿಲ್ಲಾಡಳಿತ ವತಿಯಿಂದ ಕರ್ನಾಟಕ ಸಂಭ್ರಮ-50 ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡದ ಅಂಗವಾಗಿ ಗೋಕಾಕ್ ಚಳವಳಿ ಹಿನ್ನೋಟ-ಮುನ್ನೋಟ ಸಶಕ್ತ, ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ದಿಕ್ಸೂಚಿ ನಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ತಿಳಿಸಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಾಡಲಿದ್ದು, ಗೌರವ ಉಪಸ್ಥಿತಿಯನ್ನು ಸನ್ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕಾರ್ಯಕ್ರಮದ ಆಶಯ ನುಡಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ಎಸ್ ತಂಗಡಗಿ, ಹಾಗೂ ಕಲಾ ತಂಡಗಳ ಮೆರವಣಿಗೆಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಚಾಲನೆ ನೀಡಲಿದ್ದಾರೆ.
ಘನ ಉಪಸ್ಥಿತಿಯನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಎಸ್.ಶಿವರಾಜ ಪಾಟೀಲ್ ಅವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ಮಸ್ಕಿ ಕ್ಷೇತ್ರದ ಶಾಸಕ ಆರ್.ಬಸನಗೌಡ ತುರ್ವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ, ಹಟ್ಟಿ ಚಿನ್ನದ ಗಣಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಬೀಳಗಿ ಕ್ಷೇತ್ರದ ಶಾಸಕ ಜಿ.ಟಿ.ಪಾಟೀಲ್, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಕೊಪ್ಪಳ ಲೋಕಸಭಾ ಸಂಸದರು ಕೆ.ರಾಜಶೇಖರ ಬಸವರಾಜ ಹಿತ್ನಾಳ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಷಿ, ಚಂದ್ರಶೇಖರ್ ಬಿ.ಪಾಟೀಲ್, ಎ.ವಸಂತಕುಮಾರ, ಶರಣಗೌಡ ಪಾಟೀಲ್ ಬಯ್ಯಾಪೂರ, ಬಸನಗೌಡ ಬಾದರ್ಲಿ, ಮಾನ್ವಿ ವಿಧಾನಸಭೆ ಕ್ಷೇತ್ರದ ಶಾಸಕ ಜಿ.ಹಂಪಯ್ಯ ನಾಯಕ್, ಲಿಂಗಸೂಗೂರು ವಿಧಾನಸಭೆ ಕ್ಷೇತ್ರದ ಶಾಸಕ ಮಾನಪ್ಪ ಡಿ. ವಜ್ಜಲ್, ದೇವದುರ್ಗ ವಿಧಾನಸಭೆ ಕ್ಷೇತ್ರದ ಶಾಸಕಿ ಕರೆಮ್ಮ ಜಿ.ನಾಯಕ, ರಾಯಚೂರು ನಗರಸಭೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನಿಶ್, ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಂ.ಹನುಮAತಪ್ಪ, ರಾಯಚೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಹರೀಶ್ ರಾಮಸ್ವಾಮಿ ಅವರು ಭಾಗಿಯಾಗಲಿದ್ದಾರೆ.
ಅತಿಥಿಗಳಾಗಿ ಕರ್ನಾಟಕ ಸಾಹಿತ್ಯ ಆಕಾಡೆಮಿಯ ಅಧ್ಯಕ್ಷರಾದ ಪ್ರೂ.ಎಲ್.ಎನ್.ಮುಕುಂರ್ ರಾಜ್, ಕರ್ನಾಟಕ ಸಂಗೀತ ನೃತ್ಯ ಆಕಾಡೆಮಿಯ ಶ್ರೀಮತಿ ಶುಭಾ ಧನಂಜಯ್, ಕರ್ನಾಟಕ ನಾಟಕ ಆಕಾಡೆಮಿಯ ಅಧ್ಯಕ್ಷರಾದ ಕೆ.ವಿ.ನಾಗರಾಜ ಮೂರ್ತಿ, ಕರ್ನಾಟಕ ಲಲಿತಕಲಾ ಆಕಾಡೆಮಿಯ ಅಧ್ಯಕ್ಷರಾದ ಪ.ಸ.ಕುಮಾರ್, ಕರ್ನಾಟಕ ಶಿಲ್ಪಕಲಾ ಆಕಾಡೆಮಿಯ ಅಧ್ಯಕ್ಷರಾದ ಎಂ.ಸಿ.ರಮೇಶ್, ಕರ್ನಾಟಕ ಜಾನಪದ ಆಕಾಡೆಮಿಯ ಅಧ್ಯಕ್ಷರಾದ ಶಿವಪ್ರಸಾದ್ ಗೊಲ್ಲಹಳ್ಳಿ ಅವರು ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಜೆ.ರವಿಶಂಕರ, ಸರ್ಕಾರದ ಕಾರ್ಯದರ್ಶಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ.ಅಜಯ್ ನಾಗಭೂಷಣ್ ಎಂ.ಎನ್., ಕಲಬುರಗಿ ಪ್ರಾದೇಶಿಕ ಆಯುಕ್ತರಾದ ಕೃಷ್ಣ ಬಾಜಪೇಯಿ, ಅವರು ಭಾಗವಹಿಸಲಿದ್ದಾರೆ.
ಗೋಕಾಕ್ ಚಳವಳಿಯ ಹಿರಿಯ ಹೋರಾಟಗಾರಿಗೆ ಹಾಗೂ ಸಂಸ್ಥೆಗಳಿಗೆ ಸನ್ಮಾನ; ಶಿವಮೊಗ್ಗ ಜಿಲ್ಲೆಯ ಕನ್ನಡ ಚಳವಳಿ ಪ್ರವರ್ತಕರಾದ ಕೋಣಂದೂರು ಲಿಂಗಪ್ಪ, ಬೀದರ್ ಜಿಲ್ಲೆಯ ಕನ್ನಡ ಹಿರಿಯ ಹೋರಾಟಗಾರರಾದ ಶಿವಶರಣಪ್ಪ ವಾಲಿ, ಬೆಂಗಳೂರಿನ ಕನ್ನಡ ಹಿರಿಯ ಹೋರಾಟಗಾರರಾದ ರು. ಬಸಪ್ಪ, ಧಾರವಾಡದ ಕನ್ನಡ ಹಿರಿಯ ಹೋರಾಟಗಾರರಾದ ನಿಂಗಣ್ಣ ಕುಂಟಿ, ಬೆಂಗಳೂರಿನ ಕನ್ನಡ ಹಿರಿಯ ಹೋರಾಟಗಾರರಾದ ಸಾ.ರಾ. ಗೋವಿಂದು, ದಾವಣಗೆರೆಯ ಕನ್ನಡ ಹಿರಿಯ ಹೋರಾಟಗಾರರಾದ ಜೆ.ಕಲೀಂ ಬಾಷ, ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘಗೆ ಸನ್ಮಾನ ಮಾಡಲಾಗುವುದು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರೊ.ಎ.ಬಿ.ರಾಮಚಂದ್ರಪ್ಪ, ಡಾ.ವಿ.ಪಿ.ನಿರಂಜನಾರಾಧ್ಯ, ಟಿ.ಗುರುರಾಜ್, ಡಾ.ರವಿಕುಮಾರ್ ನೀಹ, ದಾಕ್ಷಾಯಿಣಿ ಹುಡೇದ ಯಾಕೂಬ್ ಖಾದರ್ ಗುಲ್ವಾಡಿ, ವಿರೂಪಣ್ಣ ಕಲ್ಲೂರು, ಟಿ.ತಿಮ್ಮೇಶ್ ಸೇರಿದಂತೆ ಪ್ರೊ. ಆರ್.ಕೆ. ಹುಡುಗಿ, ಡಾ.ಎಲ್.ಹನುಮಂತಯ್ಯ ಸಿ.ಬಿ. ಚಿಲ್ಲರಾಗಿ, ಡಾ. ಅಲ್ಲಮಪ್ರಭು ಬೆಟ್ಟದೂರು, ಜಿ.ಕೆ. ಸತ್ಯ, ಡಾ. ಮೀನಾಕ್ಷಿ ಬಾಳಿ, ಡಾ. ರಾಜೇಂದ್ರ ಚೆನ್ನಿ, ಓಂ ಶಿವಪ್ರಕಾಶ್, ಗಾಳಪ್ಪ ಪೂಜಾರಿ, ಸುಧಾ ಚಿದಾನಂದಗೌಡ, ವಿಶ್ವಾರಾಧ್ಯ ಸತ್ಯಂಪೇಟೆ, ಹನುಮಂತರಾವ ದೊಡ್ಡಮನಿ, ಶಿರಗಾನಹಳ್ಳಿ ಶಾಂತಾನಾಯ್ಕ, ಅರುಣ್ ಜೋಳದ ಕೂಡ್ಲಿಗಿ, ರೇಣುಕಾ ಹೆಳವರ್, ಸಂಜಯಕುಮಾರ್ ಅತಿವಾಳೆ, ಪ್ರೇಮ ಹೂಗಾರ, ಅಯ್ಯಪ್ಪಯ್ಯ ಹುಡಾ, ಎಂ. ಸಂಗಪ್ಪ, ಮೆಹಬೂಬ ಮಠದ, ಸುರೇಶ್ ಜಿ.ಎಸ್. ಕಲಾಪ್ರಿಯ, ಪದ್ಮಣ್ಣ ಹಿರೆಗಿಡ್ಡನವರ್, ಲಿಂಗಾರೆಡ್ಡಿ ಶೇರಿ, ಚಂದ್ರಕಲಾ ಬಿದರಿ, ಸಿದ್ದರಾಮ ಹೊನ್ಕಲ್, ಅಜಮೀರ್ ನಂದಾಪುರ ಮಲ್ಲಿಕಾರ್ಜುನ ಬಿ. ಮಾನ್ನಡೆ ಸೇರಿದಂತೆ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಂ.ಪುಟ್ಟಮಾದಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾದ ಡಾ.ಸಂತೋಷ ಹಾನಗಲ್ಲ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.