Breaking News

ವಾರ್ತಾ ಇಲಾಖೆಯ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಕೊಪ್ಪಳದ ಇಬ್ಬರಿಗೆ ರಾಜ್ಯಮಟ್ಟದ ಬಹುಮಾನ

State level prize for two from Koppal in Bapuji Essay Competition of News Department

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೊಪ್ಪಳ (ಕರ್ನಾಟಕ ವಾರ್ತೆ) ಅ.03: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಕೊಪ್ಪಳ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಬಹುಮಾನ ಪಡೆದು ಸಾಧನೆ ತೋರಿದ್ದಾರೆ.
ಹಂಪಿ ಕನ್ನಡ ವಿವಿಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿರುವ ಕೊಪ್ಪಳ ತಾಲ್ಲೂಕಿನ ಗೊಂಡಬಾಳ ಗ್ರಾಮದ ಪ್ರವೀಣ್ ನಿಂಗಪ್ಪ ಕಿತ್ನೂರ್ ಅವರು ಬರೆದ ಗಾಂಧೀಜಿಯವರ ಸ್ವರಾಜ್ ಮತ್ತು ಆರ್ಥಿಕ ಚಿಂತನೆಗಳು ಪ್ರಬಂಧವು ವಾರ್ತಾ ಇಲಾಖೆ ಏರ್ಪಡಿಸಿದ್ದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯ ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದೆ.
ಅದೇ ರೀತಿ ತುಮಕೂರು ವಿವಿಯ ಎಂ.ಎ.ಪತ್ರಿಕೋದ್ಯಮ ಮೊದಲ ವರ್ಷದ ವಿದ್ಯಾರ್ಥಿಯಾಗಿರುವ ಕುಷ್ಟಗಿ ತಾಲ್ಲೂಕಿನ ಎಂ.ಗುಡದೂರ ಗ್ರಾಮದ ಶರಣಪ್ಪ ಅವರು ಬರೆದ “ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು” ಪ್ರಬಂಧವು ದ್ವಿತೀಯ ಸ್ಥಾನ ಪಡೆದಿದೆ.
ಬೆಂಗಳೂರಿನ ವಾರ್ತಾಸೌಧದಲ್ಲಿ ಅಕ್ಟೋಬರ್ 2ರಂದು ನಡೆದ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಕ್ರಮವಾಗಿ ತಲಾ 31 ಸಾವಿರ ರೂ. ಹಾಗೂ 21 ಸಾವಿರ ರೂ.ನಗದು ಹಾಗೂ ಪುರಸ್ಕಾರ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರವಿಸಿದರು.
ಶಾಸಕ ರಿಜ್ವಾನ್ ಅರ್ಷದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ವಾರ್ತಾ ಇಲಾಖೆ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕಚಂದ್ರ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ ಅವರು ಇದ್ದರು.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *