As a part of Gokak movement retrospective program, various art troupes parade was launched by the minister.
ರಾಯಚೂರು,ಅ.05,(ಕರ್ನಾಟಕ ವಾರ್ತೆ):- ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಯಚೂರು ಜಿಲ್ಲಾಡಳಿತದ ವತಿಯಿಂದ ಗೋಕಾಕ್ ಚಳವಳಿಯ ಹಿನ್ನೋಟ- ಮುನ್ನೋಟ ಕಾರ್ಯಕ್ರಮದ ಅಂಗವಾಗಿ
ಇಂದು ನಗರದ ಬಸವೇಶ್ವರ ವೃತ್ತದಲ್ಲಿ ಈ ವೇಳೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ವಿವಿಧ ಕಲಾ ತಂಡಗಳ ಮೆರೆವಣಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಂ.ಪುಟ್ಟಮಾದಯ್ಯ,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾದ ಸಂತೋಷ ಹಾನಗಲ್, ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ಸಹಾಯಕ ಆಯುಕ್ತರಾದ ಗಜಾನನ ಬಾಳೆ, ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.