Breaking News

೭೬,೮೫,೮೯ ಮತ್ತು ೯೨ ಕಾಲುವೆಗಳಿಗೆ ಸಮರ್ಪಕವಾಗಿ ಗೇಜ್ ನಿರ್ವಹಣೆಮಾಡುವುದಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ

Request to the Chief Minister to take measures for adequate gauge maintenance of canals 76, 85, 89 and 92.

ಜಾಹೀರಾತು
IMG 20241006 WA0443

ಮಾನ್ವಿ: ಪಟ್ಟಣದಲ್ಲಿ ಶನಿವಾರ ತಾಲೂಕಿನ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡುವುದಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭಾರತೀಯ ಜನತಾ ಪಾರ್ಟಿ ವತಿಯಿಂದ ತಾಲೂಕಿನ ವಿವಿಧ ಸಮಸ್ಯೆಗಳನ್ನು ಪರಿಹಾರಿಸುವಂತೆ ಮಾಜಿ ಶಾಸಕ ಗಂಗಾಧರ ನಾಯಕ ಮನವಿ ಸಲ್ಲಿಸಿ ಮಾತನಾಡಿ ತುಂಗಭದ್ರ ಎಡದಂಡೆ ಕಾಲುವೆಯ ಉಪಕಾಲುವೆಗಳಾದ ಮೈಲ್ ೭೬,೮೫,೮೯ ಮತ್ತು ೯೨ ಕಾಲುವೆಗಳಿಗೆ ಸಮರ್ಪಕವಾಗಿ ಗೇಜ್ ನಿರ್ವಹಣೆ ಮಾಡುವ ಮೂಲಕ ಕೆಳಭಾಗದ ರೈತರ ಜಮೀನುಗಳಿಗೆ ನೀರು ತಲುಪಿಸುವುದಕ್ಕೆ ಕ್ರಮ ಕೈಗೊಳ್ಳಬೇಕು, ರೈತರ ನೀರಾವರಿ ಸಮಸ್ಯೆಗಳಿಗೆ ನವಲಿಯಲ್ಲಿ ಸಮನಾಂತರ ಜಲಶಾಯವನ್ನು ನಿರ್ಮಿಸಬೇಕು, ಮಾನ್ವಿ ತಾಲೂಕಿನ ಸರಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರ ಹಾಗೂ ಸಿಬ್ಬಂದಿಗಳ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಬೇಕು. ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ ಕಾಯಂ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ತಾಲೂಕಿನ ಎಲ್ಲಾ ಇಲಾಖೆಗಳ ವಸತಿ ನಿಲಯಗಳಲ್ಲಿ ಮೂಲಭೂತಸೌಲಭ್ಯಗಳನ್ನು ಕಲ್ಪಿಸಬೇಕು ಬಾಡಿಗೆಯಲ್ಲಿ ನಡೆಸುತ್ತಿರುವ ವಸತಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಬೇಕು ಮಾನ್ವಿ ಪುರಸಭೆಯನ್ನು ನಗರಸಭೆಯಾಗಿ ಮೆಲ್ದಾರ್ಜೆಗೆರಿಸಬೇಕು ,ಎಂದು ಒತ್ತಾಯಿಸಿದರು.
ಮಾಜಿ ಶಾಸಕ ಬಸವನಗೌಡ ಬ್ಯಾಗವಾಟ್,ಮಾನ್ವಿ ಬಿಜೆಪಿ ಪಕ್ಷದ ಮಂಡಲ ಅಧ್ಯಾಕ್ಷರಾದ ಜಿ.ಸುಧಾಕರ್ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಸೇರಿದಂತೆ ಇನ್ನಿತರರು ಇದ್ದರು.

About Mallikarjun

Check Also

screenshot 2025 10 16 19 20 27 64 e307a3f9df9f380ebaf106e1dc980bb6.jpg

ಸರ್ವೋದಯ ಪಕ್ಷದ ಕಾರ್ಯಾಧ್ಯಕ್ಷರಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇಮಕ

MLA Darshan Puttannaiah appointed as Sarvodaya Party working president ಬೆಂಗಳೂರು,ಅ.೧೬;ಸರ್ವೋದಯ ಕರ್ನಾಟಕ ಪಕ್ಷದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಹಾಗೂ ಮೈಸೂರಿನ ಕರುಣಾಕರ.ಬಿ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.